FACT CHECK | ಚಿರತೆಯೊಂದು ಬನ್ನೇರುಘಟ್ಟದಲ್ಲಿ ಕಾಣಿಸಿಕೊಂಡಿದೆ ಎಂದು ಹಳೆಯ ವಿಡಿಯೋ ಹಂಚಿಕೆ
ಚಿರತೆಯೊಂದು ವಸತಿ ಪ್ರದೇಶದ ಮೂಲಕ ಓಡಿಹೋಗಿ ಮೋಟಾರ್ ಬೈಕಿಗೆ ಡಿಕ್ಕಿ ಹೊಡೆಯುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ದೃಶ್ಯಗಳು ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಇತ್ತೀಚೆಗೆ ನಡೆದ ಘಟನೆ ಎಂದು ಹೇಳಲಾಗುತ್ತಿದೆ.

ಬೆಂಬಳೂರು ಡೈರೀಸ್ ಎಂಬ ಇನ್ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಬೆಂಗಳೂರಿನ ಬನ್ನೇರುಘಟ್ಟ ಬಳಿ ಚಿರತೆ ಕಂಡುಬಂದಿದೆ’’ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ನವೆಂಬರ್ 4, 2022 ರಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ ವಿಡಿಯೋ ಲಭ್ಯವಾಗಿದೆ.
ಮಾಹಿತಿಯ ಪ್ರಕಾರ, ‘‘ಮೈಸೂರಿನಲ್ಲಿ ಚಿರತೆ ಜನರ ಮೇಲೆ ದಾಳಿ ಮಾಡುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೈಸೂರಿನ ಕನಕ ನಗರದಲ್ಲಿ ಈ ಘಟನೆ ನಡೆದಿದೆ. ವೀಡಿಯೊದಲ್ಲಿ ಚಿರತೆ ಬೀದಿಯಲ್ಲಿ ಓಡಿಹೋಗಿ ಬೈಕ್ನಲ್ಲಿ ಬಂದ ವ್ಯಕ್ತಿಯ ಮೇಲೆ ಧಾವಿಸುತ್ತಿರುವುದು ಕಂಡುಬರುತ್ತದೆ. ದಿಗ್ಭ್ರಮೆಗೊಂಡ ಬೈಕ್ ಸವಾರ ತನ್ನ ವಾಹನದಿಂದ ಬೀಳುತ್ತಾನೆ. ನಂತರ ಚಿರತೆ ಓಡಿಹೋಗುವುದನ್ನು ಮತ್ತು ಸ್ಥಳೀಯರು ಅದನ್ನು ಬೆನ್ನಟ್ಟುವುದನ್ನು ಕಾಣಬಹುದು’’ ಎಂದು ಬರೆಯಾಗಿದೆ.
ಹಾಗೆಯೆ ನವೆಂಬರ್ 4, 2022 ರಂದು ದಿ ಎಕನಾಮಿಕ್ ಟೈಮ್ಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಕೂಡ ಇದೇ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ‘‘ಮೈಸೂರಿನ ಜನವಸತಿ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ, ಕೆಲವು ಜನರ ಮೇಲೆ ದಾಳಿ ಮಾಡಿದೆ; ನಂತರ ಅರಣ್ಯ ಇಲಾಖೆಯಿಂದ ಸೆರೆಹಿಡಿಯಲ್ಪಟ್ಟಿದೆ” ಎಂಬ ವಿವರಣೆ ನೀಡಲಾಗಿದೆ.
ಇದೇ ವೀಡಿಯೊವನ್ನು ನವೆಂಬರ್ 2022 ರಲ್ಲಿ ಇತರ ಸುದ್ದಿ ವೆಬ್ಸೈಟ್ಗಳ ವಿವಿಧ ಯೂಟ್ಯೂಬ್ ಚಾನೆಲ್ಗಳಲ್ಲಿ ಅಪ್ಲೋಡ್ ಮಾಡಿರುವುದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಇದು ಮೈಸೂರಿನಲ್ಲಿ ನಡೆದ ಘಟನೆ ಎಂದು ಇದರಲ್ಲಿ ಹೇಳಲಾಗಿದೆ.
ಇನ್ನು ನವೆಂಬರ್ 4, 2022 ರಂದು NDTV ಹಾಗೂ ನವೆಂಬರ್ 5, 2022 ರಂದು ಟೈಮ್ಸ್ ಆಫರ್ ಇಂಡಿಯಾ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ನೊಂದಿಗೆ ಇದು ಮೈಸೂರಿನಲ್ಲಿ ನಡೆದಿರುವ ಘಟನೆ ಎಂದು ಸುದ್ದಿ ಪ್ರಕಟಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದೆ ಎಂದು, 2022 ರ ನವೆಂಬರ್ನಲ್ಲಿ ಮೈಸೂರಿನಲ್ಲಿ ನಡೆದ ಹಳೆಯ ಘಟನೆಯ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ಕೃಪೆ : ನ್ಯೂಸ್ ಮೀಟರ್
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಅಬುಧಾಬಿಯಲ್ಲಿ ಸಲ್ಮಾನ್ ಖಾನ್ ಮತ್ತು ನೋರಾ ಫತೇಹಿ ಚಿನ್ನದ ಪ್ರತಿಮೆಯ ವಿಡಿಯೋ ವೈರಲ್! ವಾಸ್ತವವೇನು?

