FACT CHECK | ಸುನೀತಾ ವಿಲಿಯಮ್ಸ್ ಭೂಮಿಗೆ ಹಿಂದಿರುಗಿದ ವಿಡಿಯೋ ಎಂದು 2024ರ ಹಳೆಯ ವಿಡಿಯೋವನ್ನು

ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಒಂಬತ್ತು ತಿಂಗಳುಗಳನ್ನು ಕಳೆದ ನಂತರ ಮಾರ್ಚ್ 19, 2025 ರಂದು ಭೂಮಿಗೆ ಮರಳಿದರು. ಇದೀಗ ಸುನಿತಾ ಅವರು ಬಾಹ್ಯಾಕಾಶದಿಂದ ಹಿಂದಿರುಗುತ್ತಿರುವಾಗ, ಶೂನ್ಯ-ಗುರುತ್ವಾಕರ್ಷಣೆಯ ಪ್ರದೇಶವನ್ನು ಪ್ರವೇಶಿಸಿ ನೃತ್ಯ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭೂಮಿಗೆ ಹಿಂದಿರುಗಿದ ಸಂದರ್ಭದ ವಿಡಿಯೋ ಇದು ಎಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ.

ಮಾರ್ಚ್ 19, 2025 ರಂದು ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘‘ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ನಾಸಾ ವಿಜ್ಞಾನಿ, ಗಗನಯಾತ್ರಿ ಬುಚ್‌ ವಿಲ್ಮೋರ್ ಅವರು ಕಳೆದ 9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಇದ್ದರು. ತಾಂತ್ರಿಕ ಸಮಸ್ಯೆಯಿಂದ ಅವರು ಭೂಮಿಗೆ ಬರಲು ಸಾಧ್ಯವಾಗಿರಲಿಲ್ಲ. ಕಡೆಗೂ ಅವರ ಬಾಹ್ಯಾಕಾಶ ವಾಸ ಮುಗಿದಿದ್ದು ಭೂಮಿಗೆ ಸುರಕ್ಷಿತವಾಗಿ ವಾಪಾಸಾಗಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವನ್ನು ಪರಿಶೀಲಿಸಲು,  ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಬೋಯಿಂಗ್ ಸ್ಪೇಸ್​ನ ಅಧಿಕೃತ ಎಕ್ಸ್ ಹ್ಯಾಂಡಲ್, ಇದು ಜೂನ್ 07, 2024 ರಂದು ಇದೇ ವೈರಲ್ ವಿಡಿಯೋವನ್ನು ಉತ್ತಮ ಕ್ವಾಲಿಟಿಯಲ್ಲಿ ಅಪ್‌ಲೋಡ್ ಮಾಡಿರುವುದು ಕಂಡುಬಂತು.

ವಾಸ್ತವವಾಗಿ ಈ ವೀಡಿಯೊ ಜೂನ್ 2024 ರದ್ದಾಗಿದೆ. ಸುನೀತಾ ಮತ್ತು ಅವರ ಸಿಬ್ಬಂದಿ ವಿಲ್ಮೋರ್ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಅನ್ನು ಪ್ರವೇಶಿಸಿದ ಸಂದರ್ಭದ ವೀಡಿಯೊ ಇದಾಗಿದೆ.‘‘Hugs all around! The Expedition 71 crew greets Butch Wilmore and @Astro_Suni aboard @Space_Station after #Starliner docked at 1:34 p.m. ET on June 6.’’ ಎಂದು ಈ ವೀಡಿಯೊಕ್ಕೆ ಶೀರ್ಷಿಕೆ ನೀಡಲಾಗಿದೆ. ಇದು ವೀಡಿಯೊವು ವಾಸ್ತವವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಅವರ ಆಗಮನವನ್ನು ತೋರಿಸುತ್ತದೆ.

ಜೂನ್ 07, 2024 ರಂದು NDTV ಪ್ರಾಫಿಟ್‌ನ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ಇದೇ ವೈರಲ್ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ಈ ವೀಡಿಯೊಗೆ ‘‘ISS ತಲುಪಿದ ನಂತರ NASA ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ ವಿಜಯ ನೃತ್ಯ’’ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ANI ಕೂಡ ಜೂನ್ 7, 2024 ರಂದು ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡು ಸುದ್ದಿ ಪ್ರಕಟಿಸಿದೆ. ‘‘ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಶುಕ್ರವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ನಾಸಾದ ದೃಶ್ಯಗಳು ಗುರುವಾರ ಮಧ್ಯಾಹ್ನ 3:46 ET ಕ್ಕೆ (ಶುಕ್ರವಾರ ಬೆಳಿಗ್ಗೆ IST) ಇಬ್ಬರು ನಾಸಾ ಗಗನಯಾತ್ರಿಗಳು ಯುಎಸ್‌ಎಸ್‌ನ ಹ್ಯಾಚ್ ಬಾಗಿಲಿನ ಮೂಲಕ ಪ್ರವೇಶಿಸುತ್ತಿರುವುದನ್ನು ತೋರಿಸಿದೆ. ಐಎಸ್‌ಎಸ್‌ನಲ್ಲಿರುವ ಎಕ್ಸ್‌ಪೆಡಿಶನ್ 71 ಸಿಬ್ಬಂದಿಯ ಏಳು ಗಗನಯಾತ್ರಿಗಳು ಬೋಯಿಂಗ್‌ನ ಹೊಸ ಕ್ಯಾಪ್ಸುಲ್‌ನಲ್ಲಿ ಹಾರಿದ ಮೊದಲ ಗಗನಯಾತ್ರಿಗಳಾದ ಸುನೀತಾ ಮತ್ತು ಬುಚ್ ಅವರನ್ನು ಸ್ವಾಗತಿಸಿದರು’’ ಎಂದು ಬರೆದುಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಜೂನ್ 2024 ರಲ್ಲಿ ಸುನೀತಾ ಮತ್ತು ಅವರ ಸಿಬ್ಬಂದಿ ವಿಲ್ಮೋರ್ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಅನ್ನು ಪ್ರವೇಶಿಸಿದ ಸಂದರ್ಭದ ವಿಡಿಯೋವನ್ನು, ಇತ್ತೀಚೆಗೆ ಅವರು ಬಾಹ್ಯಾಕಾಶದಿಂದ ಹಿಂದಿರುಗಿದ ಸಂದರ್ಭದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ  ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | RCB ಮಾಜಿ ನಾಯಕ ಫಾಪ್‌ ಡುಪ್ಲಿಸಿಸ್‌ ಬೇಸರದ ಪೋಸ್ಟ್‌ ನಿಜವೇ ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights