FACT CHECK | ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಳೆಯ ಫೋಟೊವನ್ನು ತಪ್ಪಾಗಿ ಹಂಚಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ TV ಪರದೆಯಲ್ಲಿ ಪ್ರಸಾರವಾಗುತ್ತಿರುವ ಮುಸ್ಲಿಂ ಮುಖಂಡನ ಭಾಷಣವನ್ನು ನೋಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಥ್ರೆಡ್ ಬಳಕೆದಾರ ನಿಸಾರ್ ಖಾನ್ ಮಾರ್ಚ್ 19 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಲಿಪ್ ಅನ್ನು ಆಕ್ಷೇಪಾರ್ಹ ಬರಹದೊಂದಿಗೆ ಪೋಸ್ಟ್ ಮಾಡಿದ್ದಾರೆ.

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್‌ ವಿಡಿಯೋ ಮತ್ತು ಫೋಟೋಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮಗುರು ಮಾತನಾಡುವ ಒಂದು ಭಾಗದ ಕೀ ಫ್ರೇಮ್‌ ಅನ್ನು ಬಳಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ ಪೋಸ್ಟ್‌ಗೆ ಸಂಬಂಧಿಸಿದಂತೆ  AZMI MUSHAIRA MEDIA ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿದ ಮೂಲ ವಿಡಿಯೋ ಲಭ್ಯವಾಗಿದೆ.

30 ಮೇ 2024ರಂದು  ಅಪ್‌ಲೋಡ್ ಮಾಡಲಾದ ಈ ವೀಡಿಯೊದ ಆರಂಭದಲ್ಲಿ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪೂರ್ವಾಂಚಲ್ ಪ್ರದೇಶದ ಅಧ್ಯಕ್ಷ ಇಸ್ರಾರ್ ಅಹ್ಮದ್ ಅವರು ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳುವುದನ್ನು ಕೇಳಬಹುದು. ಹಾಗಾಗಿ ಇದು ಹಳೆಯ ವಿಡಿಯೋ ಎಂಬುದು ಸ್ಪಷ್ಟವಾಗಿದೆ.

ಇನ್ನು ವೈರಲ್‌ ಪೋಸ್ಟ್‌ನಲ್ಲಿ ಯೋಗಿ ಆದಿತ್ಯನಾಥ್‌ ಅವರು ಕೈಮುಗಿದು ಕುಳಿತಿರುವ ಭಾಗವನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 21 ಮಾರ್ಚ್‌ 2017ರಂದು ಸೋಶಿಯಲ್‌ ನ್ಯೂಸ್‌ XYZ ಎಂಬ ಸುದ್ದಿತಾಣವೊಂದು ಪ್ರಕಟಿಸಿದ ವರದಿಯೊಂದು ಕಂಡು ಬಂದಿದೆ. ಇದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರನ್ನು ಭೇಟಿಯಾಗಿದ್ದಾರೆ ಎಂದು ಉಲ್ಲೇಖಿಸಿರುವದು ಕಂಡು ಬಂದಿದೆ. ಈ ಮೂಲಕ ವೈರಲ್‌ ಪೋಸ್ಟ್‌ನಲ್ಲಿ ಯೋಗಿ ಆದಿತ್ಯನಾಥ್‌ ಅವರ ಭಾಗದ ಚಿತ್ರ ಕೂಡ ಹಳೆಯದು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌ ಅವರು ಮುಸ್ಲಿಂ ಧರ್ಮ ಗುರುವಿನ ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಿಸಿದ್ದಾರೆ ಎಂಬುದು ಸುಳ್ಳು. 2017ರಲ್ಲಿ ರಾಷ್ಟ್ರಪತಿ ಆಗಿದ್ದ ಪ್ರಣಬ್‌ ಮುಖರ್ಜಿ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆಯ ಸಂದರ್ಭದ ಫೋಟೊವನ್ನು ಸುಳ್ಳು ಮತ್ತು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ  ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಶುಭ್‌ಮನ್‌ ಗಿಲ್‌ ಎದೆಯ ಮೇಲೆ ಅಂಬೇಡ್ಕರ್‌ ಟ್ಯಾಟೂ ಇರುವ ಫೋಟೊ ವೈರಲ್ ಅಸಲೀಯತ್ತೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights