FACT CHECK | ಒಂದು ಕುಟುಂಬ ಒಂದು ಉದ್ಯೋಗ’ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆಯೇ?
‘ಒಂದು ಕುಟುಂಬ ಒಂದು ಉದ್ಯೋಗ’ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ಪ್ರಸಾರವಾಗುತ್ತಿದೆ. ಪ್ರತಿ ಮನೆಯ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗುತ್ತಿದೆ.
‘Govt Help’ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ 8 ನಿಮಿಷಗಳ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. 2025ರ ‘ಒಂದು ಕುಟುಂಬ ಒಂದು ಉದ್ಯೋಗ’ ಯೋಜನೆ ಇದು ಎಂದು ಹೇಳಲಾಗಿದೆ.
ಹಾಗಿದ್ದರೆ ನಿಜವಾಗಿಯೂ, ಕೇಂದ್ರ ಸರ್ಕಾರ ‘ಒಂದು ಕುಟುಂಬ ಒಂದು ಉದ್ಯೋಗ’ ಯೋಜನೆಯನ್ನು ಜಾರಿಗೊಳಿಸಿದೆಯೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಕೇಂದ್ರ ಸರ್ಕಾರ ನಿಜವಾಗಿಯೂ ಇಂತಹ ಯೋಜನೆ ಜಾರಿಗೆ ತಂದಿದೆಯೇ ಎಂದು ಪರಿಶೀಲಿಸಲು ಪ್ರಮುಖ ಕೀವರ್ಡ್‌ನೊಂದಿಗೆ ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಮಾಹಿತಿಯೂ ಲಭ್ಯವಾಗಿಲ್ಲ.
ನಂತರ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಯೋಜನೆಯ ಬಗ್ಗೆ ಹುಡುಕಾಟ ನಡೆಸಲಾಯಿತು. ಆದರೆ ಅಲ್ಲಿಯೂ ಈ ಯೋಜನೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಇರಲಿಲ್ಲ.
“एक परिवार – एक नौकरी योजना के तहत देश के प्रत्येक परिवार के एक सदस्य को मिलेगी सरकारी नौकरी..”
आकर्षक दावा है न…
✅ केंद्र सरकार द्वारा एक परिवार – एक नौकरी योजना संचालित नहीं होती है।
✅ #Youtube चैनल “ravantechckt9084” के वीडियो थंबनेल के फर्जी… pic.twitter.com/x0eqqpT7Ho
— PIB Fact Check (@PIBFactCheck) March 21, 2025
ಮತ್ತಷ್ಟು ಮಾಹಿತಿಗಾಗಿ ಗೂಗಲ್ ಸರ್ಚ್ ಮಾಡಿದಾಗ, ಪಿಐಬಿ (ಪ್ರೆಸ್ ಇನ್ಫರ್ಮೇಷನ್ ಬ್ಯೂರೋ)ಯ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಪರರಿಶೀಲಿಸಲಿದಾಗ, ‘ಒಂದು ಕುಟುಂಬ ಒಂದು ಉದ್ಯೋಗ’ದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ.
‘ಒಂದು ಕುಟುಂಬ ಒಂದು ಉದ್ಯೋಗ ಯೋಜನೆ 2025’ ಎಂದು ಹೇಳುವ ವಿಡಿಯೋಗಳನ್ನು ನಂಬಬೇಡಿ ಎಂದು ತನ್ನ ಎಕ್ಸ್ ಖಾತೆಯಲ್ಲೇ ಪಿಐಬಿ ಸ್ಪಷ್ಟನೆ ನೀಡಿದ್ದು, ‘ಇದು ಸುಳ್ಳು ಸುದ್ದಿ. ಸರ್ಕಾರವು ಇಂತಹ ಯಾವುದೇ ಯೋಜನೆಯನ್ನು ತಂದಿಲ್ಲ’ ಎಂದು ಹೇಳಿದೆ.
ಕೇಂದ್ರ ಸರ್ಕಾರವು ‘ಒಂದು ಕುಟುಂಬ ಒಂದು ಉದ್ಯೋಗ’ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯು ಸುಳ್ಳು. ಸರ್ಕಾರವು ಇಂತಹ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ. ಯೂಟ್ಯೂಬರ್‌ಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ :FACT CHECK | ಮಗಳನ್ನೆ ಮದುವೆಯಾದ ತಂದೆ ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?

