FACT CHECK | BJP ಸೇರಿದ್ರಾ ಮಹೇಂದ್ರ ಸಿಂಗ್ ಧೋನಿ

ಪ್ರಧಾನಿ ಮೋದಿ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಹೇಂದ್ರ ಸಿಂಗ್ ಧೋನಿ BJP ಸೇರಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

@daramendrakum2 ಎಂಬ ಎಕ್ಸ್‌ ಬಳಕೆದಾರರು ಪ್ರಧಾನಿ ಮೋದಿ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಚಿತ್ರವನ್ನು ಹಂಚಿಕೊಂಡಿದ್ದು,  ಮಹೇಂದ್ರ ಸಿಂಗ್ ಧೋನಿ BJPಗೆ ಸೇರಿದ್ದಾರೆ. ಎಂದು ಬರೆದುಕೊಂಡಿದ್ದಾರೆ.

@RekhaGuptaDelhi ಎಂಬ ಎಕ್ಸ್‌ ಬಳಕೆದಾರರು ಮಹಿ BJPಗೆ ಸೇರಿದ್ದಾರೆ ಎಂಬ ಹೇಳಿಕೆಯೊಂದಿಗೆ, ಪ್ರಧಾನಿ ಮೋದಿ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದು ಮಹೇಂದ್ರ ಸಿಂಗ್ ಧೋನಿ ನಿಜವಾಗಿಯೂ BJP ಪಕ್ಷಕ್ಕೆ ಸೇರಿದ್ದಾರೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಮಹೇಂದ್ರ ಸಿಂಗ್ ಧೋನಿ BJPಗೆ ಸೇರಿದ್ದಾರೆ ಎಂಬ ಹಲವು ಎಕ್ಸ್-ಪೋಸ್ಟ್ಗಳು ಲಭ್ಯವಾಗಿವೆ. ಈ ಎಲ್ಲಾ ಪೋಸ್ಟ್‌ಗಳಲ್ಲಿಯೂ ಮಹೇಂದ್ರ ಸಿಂಗ್ ಧೋನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗಿದೆ.

 

ವಾಸ್ತವವಾಗಿ ಮಹೇಂದ್ರ ಸಿಂಗ್ ಧೋನಿ BJP ಸೇರಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಒಂದು ವೇಳೆ ಧೋನಿ ಬಿಜೆಪಿ ಸೇರಿದ್ದು ನಿಜವೇ ಆಗಿರುತ್ತಿದ್ದರೆ, ರಾಷ್ಟ್ರ ಮಟ್ಟದ ಸುದ್ದಿಯಾಗಿ ಎಲ್ಲೆಡೆ ಪ್ರಚಾರ ಪಡೆಯುತ್ತಿತ್ತು. ಆದರೆ ಆರೀತಿ ಯಾವುದೇ ಘಟನೆ ಜರುಗಿಲ್ಲ ಎಂಬುದು ಸ್ಪಷ್ಟವಾಗಿದೆ.

ವೈರಲ್ ಫೋಟೊವನ್ನು AI ರಚಿತ ಚಿತ್ರವನ್ನು ಪತ್ತೆ ಮಾಡುವ ಟೂಲ್‌ಗಳನ್ನು ಬಳಸಿಕೊಂಡು ಪರಿಶೀಲಿಸಿದಾಗ, ಶೇ 97 % ಕೃತಕ ಬುದ್ದಿಮತ್ತೆ(ಎಐ) ಯಿಂದ ರಚಿಸಿರುವುದು ಸ್ಪಷ್ಟವಾಗಿದೆ. ಹಾಗಾಗಿ ಈ ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವಂತೆ ಧೋನಿ ಬಿಜೆಪಿ ಸೇರಿದ್ದಾರೆ ಎಂಬ ಪೋಸ್ಟ್‌ ನಕಲಿ

SightEngine Report

ಒಟ್ಟಾರೆಯಾಗಿ ಹೇಳುವುದಾದರೆ, ಮಹೇಂದ್ರ ಸಿಂಗ್ ಧೋನಿ BJP ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪ್ರಧಾನಿ ಮೋದಿ ಮತ್ತು ಮಹೇಂದ್ರ ಸಿಂಗ್ ಧೋನಿ ಜೊತೆಗಿರುವ ಫೋಟೊವನ್ನು AI (ಕೃತಕ ಬುದ್ದಿಮತ್ತೆ) ನಿಂದ ರಚಿಸಿರುವುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ  ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಾಗ ಕಣ್ಣೀರು ಹಾಕಿದ್ರಾ ಓವೈಸಿ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights