FACT CHECK | ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ರಾ ರಾಹುಲ್ ಗಾಂಧಿ
ಸೋಮವಾರ ಏಪ್ರಿಲ್ 14,2025 ರಂದು ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂದು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
26 ಸೆಕೆಂಡುಗಳ ಈ ವಿಡಿಯೋದಲ್ಲಿ ರಾಹುಲ್ ಗಾಂಧಿ, ಪಿಯೂಷ್ ಗೋಯಲ್ ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವುದು ಸೆರೆಯಾಗಿದೆ. ದೆಹಲಿ ಸಿಎಂ ರೇಖಾ ಗುಪ್ತಾ, ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮತ್ತು ಇತರ ನಾಯಕರು ಸೇರಿದಂತೆ ಗೋಯಲ್ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತಿದ್ದಾಗ, ರಾಹುಲ್ ಗಾಂಧಿ ಸಚಿವರ ಕಡೆಗೆ ತಿರುಗಿಯೂ ನೋಡದಂತೆ ಕೋತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.
Mohabbat ki dukaan shut today pic.twitter.com/T41FWkF8V2
— Nabila Jamal (@nabilajamal_) April 14, 2025
ಈ ವಿಡಿಯೋವನ್ನು ಹಂಚಿಕೊಂಡಿರುವ, ಪತ್ರಕರ್ತೆ ನಬಿಲಾ ಜಮಾಲ್ ಎಂಬ ಎಕ್ಸ್ ಬಳಕೆದಾರರು ಕಾರ್ಯಕ್ರಮದ ವಿಡಿಯೋವನ್ನು ಹಂಚಿಕೊಂಡಿದ್ದು, ಪ್ರೀತಿಯ ಅಂಗಡಿಯನ್ನು ಇಂದು ಬಂದ್ ಮಾಡಲಾಗಿದೆ ಎಂಬ ವ್ಯಂಗ್ಯ ಬರಹದೊಂದಿಗೆ ಪೋಸ್ಟ್ ಮಾಡಲಾಗಿದೆ.
Why is he angry? pic.twitter.com/pg1iljaJqB
— Megh Updates ™ (@MeghUpdates) April 14, 2025
Never fall for ANI propaganda. pic.twitter.com/ULEKAHlKSr
— Mohammed Zubair (@zoo_bear) April 14, 2025
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

