FACT CHECK | ಮುಸ್ಲಿಂ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿ ಹಿಂದೂ ಅಲ್ಲ, ಮತ್ತ್ಯಾರು?

ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಯುವತಿಗೆ ಬಲವಂತದಿಂದ ಬುರ್ಖಾ ತೆಗಿಸಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಹುಡುಗಿಯೊಬ್ಬಳನ್ನು ಸುತ್ತುವರೆದಿರುವ ಪುರುಷರ ಗುಂಪೊಂದು ಆಕೆಯ ಮುಖದಿಂದ ಬುರ್ಖಾವನ್ನು ತೆಗೆದು ಚಿತ್ರೀಕರಿಸುತ್ತಿರುವುದನ್ನು ತೋರಿಸಲಾಗಿದೆ. ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಹಿಂದೂ ಯುವಕನೊಬ್ಬ ಮುಸ್ಲಿಂ ಹುಡುಗಿಗೆ ಕಿರುಕುಳ ನೀಡಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

“ಮುಜಫರ್ನಗರದಲ್ಲಿ, ಹಿಂದೂ ಯುವಕನೊಬ್ಬ ಮುಸ್ಲಿಂ ಹುಡುಗಿಯ ಬುರ್ಖಾವನ್ನು ಬಿಚ್ಚಿ, ಅವಳ ಜಡೆಯನ್ನು ಎಳೆದು, ಬಟ್ಟೆಗಳನ್ನು ತೆಗೆಯಲು ಸಹ ಪ್ರಯತ್ನಿಸಿದನು. ಈ ಪ್ರಕರಣದಲ್ಲಿ ಆರು ಜನರನ್ನು ಬಂಧಿಸಲಾಗಿದೆ. ಆದರೆ ಅವರಿಗೆ ಹುಡುಗಿಯನ್ನು ಮುಟ್ಟುವ ಹಕ್ಕನ್ನು ಯಾರು ನೀಡಿದರು? ಅಂತಹ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಬೇಕು” ಎಂದು ಆಗ್ರಹಿಸಿ ಎಕ್ಸ್‌ ಬಳಖೆದಾರರು ವಿಡಿಯೋವ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿರುವ ವಿಡಿಯೋವನ್ನು ಹೀಗೆ  ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 14 ಏಪ್ರಿಲ್‌ 2025 ರಂದು NDTV ಸುದ್ದಿ ಸಂಸ್ಥೆ ತನ್ನ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ವಿಡಿಯೋ ಲಭ್ಯವಾಗಿದೆ.

ಇದರಲ್ಲಿ ” ಉತ್ತರ ಪ್ರದೇಶದ ಮುಜಫರ್‌ ನಗರದಲ್ಲಿ ಫೈನಾನ್ಸ್ ಬ್ಯಾಂಕ್ ಉದ್ಯೋಗಿ ಸಚಿನ್ ತನ್ನ ಮಹಿಳಾ ಸಹೋದ್ಯೋಗಿಯ ಮಗಳೊಂದಿಗೆ ಕಂತು ಸಂಗ್ರಹಕ್ಕೆ ತೆರಳಿದ್ದರು. ಈ ವೇಳೆ ಕೆಲವು ಯುವಕರು ಯುವತಿಯ ಬುರ್ಖಾವನ್ನು ತೆಗೆದು ಹಲ್ಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಸರ್ತಾಜ್, ಶಾದಾಬ್, ಉಮರ್, ಅರ್ಷ್, ಶೋಯೆಬ್ ಮತ್ತು ಶಮೀ ಎಂಬ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ವಿಡಿಯೊದಲ್ಲಿ ಆರೋಪಿಗಳು ಗಾಯಗೊಂಡ ಸ್ಥಿತಿಯಲ್ಲಿ ಕುಂಟುತ್ತಾ ಕಾಣಿಸಿಕೊಂಡಿದ್ದಾರೆ.” ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

NDTV ವರದಿಯ ಪ್ರಕಾರ, ಆರೋಪಿಗಳು ಮತ್ತು ಸಂತಸ್ತ್ರೆ ಇಬ್ಬರು ಕೂಡ ಮುಸಲ್ಮಾನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ, ಮುಜಫರ್‌ನಗರದ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕೂಡ ಈ ಘಟನೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು, ಇದರಲ್ಲಿ “12 ಏಪ್ರಿಲ್  2025 ರಂದು, ಸಂಜೆ 4 ರಿಂದ 4:30 ರ ನಡುವೆ, ಫೈನಾನ್ಸ್ ಬ್ಯಾಂಕ್ ಉದ್ಯೋಗಿ ಮತ್ತು ಖಲಾಪರ್‌ನ ಮುಸ್ಲಿಂ ಹುಡುಗಿ ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಾಲದ ಕಂತು ಪಡೆದು ಹಿಂತಿರುಗುತ್ತಿದ್ದಾಗ, ಖಲಾಪರ್‌ನ ದಾರ್ಜಿವಾಲಿ ಗಾಲಿ ಬಳಿ ಕೆಲವು ಸ್ಥಳೀಯರು ಅವರನ್ನು ತಡೆದು, ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ. ದೂರಿನ ನಂತರ, ಪೊಲೀಸರು ತನಿಖೆಯನ್ನು ಪ್ರಾರಂಭಿಸಿ, ವೀಡಿಯೊ ಸಾಕ್ಷ್ಯಗಳನ್ನು ಪರಿಶೀಲಿಸಿದ್ದಾರೆ ಮತ್ತು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಆರು ವ್ಯಕ್ತಿಗಳನ್ನು ಗುರುತಿಸಲಾಗಿದೆ ಮತ್ತು ಬಂಧಿಸಲಾಗಿದೆ, ಇತರರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದು ಹೇಳಿದ್ದಾರೆ.

ಪೊಲೀಸರ ಹೇಳಿಕೆ ಮತ್ತು ದಾಖಲಾಗಿರುವ ಪ್ರಕರಣವನ್ನು ಆಧರಿಸಿ ಏಪ್ರಿಲ್‌ 14 ರಂದು ನವಭಾರತ್ ಟೈಮ್ಸ್  ವರದಿ ಮಾಡಿದೆ. ಈ ವರದಿಯಲ್ಲಿ ಆರೋಪಿಗಳು ಮತ್ತು ಸಂತ್ರಸ್ತೆ ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಹಿಂದೂ ಯುವಕನೊಬ್ಬ ಮುಸ್ಲಿಂ ಹುಡುಗಿಗೆ ಕಿರುಕುಳ ನೀಡಿದ್ದಾನೆ ಎಂಬುದು ಸುಳ್ಳು. ಈ ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ಥೆ ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ರಾಹುಲ್ ಗಾಂಧಿಗೆ ನೀಡಿದ್ದ VVIP ಸ್ಥಾನಮಾನವನ್ನು ರದ್ದುಗೊಳಿಸಿದೆಯೇ ಮೋದಿ ಸರ್ಕಾರ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights