FACT CHECK | ಪಶ್ಚಿಮ ಬಂಗಾಳದಲ್ಲಿ 10ವರ್ಷದ ದಲಿತ ಬಾಲಕನನ್ನು ಕೊಲೆ ಮಾಡಲಾಗಿದೆಯೇ?
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ವಕ್ಫ್ ತಿದ್ದುಪಡಿ ಕಾನೂನಿನ ವಿರುದ್ಧದ ಪ್ರತಿಭಟನೆಗಳು ಕೋಮು ಹಿಂಸಾಚಾರಕ್ಕೆ ತಿರುಗಿ ಅಶಾಂತಿ ಭುಗಿಲೆದ್ದಿತು. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದರು ಮತ್ತು ಮುರ್ಷಿದಾಬಾದ್ನ ವಿವಿಧ ಭಾಗಗಳಿಂದ ಭಯಭೀತರಾದ ನಿವಾಸಿಗಳು ಪಲಾಯನ ಮಾಡಿದರು. ಇದರ ಮಧ್ಯೆ ಈಗ 1 ನಿಮಿಷ 30 ಸೆಕೆಂಡ್ಗಳ ವೀಡಿಯೊ ಒಂದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಗುಂಪೊಂದು ಬಾಲಕನನ್ನು ಮನಬದಂತೆ ಹೊಡೆದು ಕಾಲಿನಿಂದ ತಿಳಿಯುತ್ತಿರುವುದನ್ನು ಕಾಣಬಹುದು.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದ ಕೀಫ್ರೇಮ್ಗಳನ್ನು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಮಾರ್ಚ್ 2025 ರಲ್ಲಿ ಕೆಲ ಬಾಂಗ್ಲಾದೇಶಿ ಬಳಕೆದಾರರು ಇದೇ ವೈರಲ್ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವುದು ಲಭ್ಯವಾಗಿದೆ.
ಇದೇ ವೇಳೆ ಮಾರ್ಚ್ 19, 2025 ರಂದು ಬಾಂಗ್ಲಾದೇಶದ ಮಾಧ್ಯಮ ಸಂಸ್ಥೆ SomoyNews.tvಇದೇ ವೈರಲ್ ವೀಡಿಯೊದ ಸ್ಕ್ರೀನ್ಶಾಟ್ನೊಂದಿಗೆ ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಈ ಘಟನೆ ಮಾರ್ಚ್ 18 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದ ಖಿಲ್ಖೇತ್ ಪ್ರದೇಶದಲ್ಲಿ ನಡೆದಿದೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹದಿಹರೆಯದವನನ್ನು ಒಂದು ಗುಂಪು ಹೊಡೆದಿದೆ’’ ಎಂದು ಹೇಳಲಾಗಿದೆ.
ಮಾರ್ಚ್ 18, 2025 ರಂದು Ekushey TV ಯೂಟ್ಯೂಬ್ ಚಾನೆಲ್ನಲ್ಲಿ ಪ್ರಕಟವಾದ ಘಟನೆಯ ವೀಡಿಯೊ ವರದಿಯು ವೈರಲ್ ವೀಡಿಯೊಗೆ ಹೋಲುವ ದೃಶ್ಯಗಳನ್ನು ತೋರಿಸುತ್ತದೆ. ವೀಡಿಯೊದ ಡಿಸ್ಕ್ರಿಪ್ಷನ್ನಲ್ಲಿ ಈ ಘಟನೆ ಕುರಿತು ಮಾಹಿತಿ ನೀಡಲಾಗಿದ್ದು, ‘‘ರಾಜಧಾನಿಯ ಖಿಲ್ಖೇತ್ ಮಧ್ಯಪಾರ ಪ್ರದೇಶದಲ್ಲಿ ಅತ್ಯಾಚಾರದ ಆರೋಪದ ಮೇಲೆ ಕೋಪಗೊಂಡ ಸ್ಥಳೀಯ ಗುಂಪೊಂದು ಯುವಕನೊಬ್ಬನನ್ನು ಥಳಿಸಿ ತೀವ್ರವಾಗಿ ಗಾಯಗೊಳಿಸಿದೆ. ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಪೊಲೀಸ್ ವಾಹನದ ಮೇಲೆ ದಾಳಿ ಮಾಡಿದರು’’ ಎಂದು ಬರೆಯಲಾಗಿದೆ.
ಒಟ್ಟಾರೆಯಗಿ ಹೇಳುವುದಾದರೆ, ಪಶ್ಚಿಮ ಬಂಗಾಳದಲ್ಲಿ ಹಿಂದೂ ಮಗುವನ್ನು ಮನಸೋ ಇಚ್ಚೆ ಹೊಡೆದು ಕೊಲೆ ಮಾಡಲಾಗಿದೆ ಎಂದು ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊ ಸುಳ್ಳು. ಈ ವಿಡಿಯೋ ಘಟನೆ ಬಾಂಗ್ಲಾದೇಶದಲ್ಲಿ ನಡೆದಿರುವುದು ಸ್ಪಷ್ಟವಾಗಿದೆ.
ಕೃಪೆ : ನ್ಯೂಸ್ ಮೀಟರ್
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಮಧ್ಯರಾತ್ರಿಯಲ್ಲಿ ಅಯೋಧ್ಯೆ ಬೀದಿಗಳಲ್ಲಿ ಹನುಮಂತ ಕಾಣಿಸಿಕೊಂಡಿದ್ದು ನಿಜವೇ?

