FACT CHECK | ಪುಟ್ಟ ಬಾಲಕನೊಬ್ಬ ತನ್ನ ತಂದೆಯ ಶವದ ಮುಂದೆ ಅಳುತ್ತಿರುವ ವಿಡಿಯೋ ಪಹಲ್ಗಾಮ್ ಘಟನೆಗೆ ಸಂಬಂಧಿಸಿದೆಯೇ?

ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಜನಪ್ರಿಯ ಪ್ರವಾಸಿ ತಾಣದ ಮೇಲೆ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಬಂದವರಾಗಿದ್ದರು. 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋಗಳು ಹರಿದಾಡುತ್ತಿವೆ. ಇದರ ಮಧ್ಯೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದ್ದು, ಪುಟ್ಟ ಬಾಲಕನೊಬ್ಬ ತನ್ನ ತಂದೆಯ ಶವದ ಮುಂದೆ ಕುಳಿತು ಅಳುತ್ತಿರುವ ಮನ ಕಲಕುವ ವಿಡಿಯೋ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

 

View this post on Instagram

 

A post shared by Rajesh Kumar (@marketing.by.raj)

‘ರಾಜೇಶ್‌ ಕುಮಾರ್‌’ ಎಂಬ ಇನ್‌ಸ್ಟಾಗ್ರಾಮ್‌ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಜೊತೆಗೆ, ‘ಈ ಮಗು ಹಿಂದೂವಾಗಿ ಹುಟ್ಟಿದ್ದೇ ತಪ್ಪು. ಅದಕ್ಕಾಗಿ ತನ್ನ ತಂದೆಯನ್ನು ಕಳೆದುಕೊಂಡಿದೆ’ ಎಂದು ಬರೆದಿದ್ದಾರೆ.

‘ಸನಾತನ್ ಸಂಸ್ಕೃತಿ ಔರ್‌ ವಿಗ್ಯಾನ್‌‘ ಹೆಸರಿನ ಇನ್ನೋರ್ವ ಬಳಕೆದಾರರು ಸಹ ಇದೇ ವಿಡಿಯೋ ಹಂಚಿಕೊಂಡಿದ್ದಾರೆ. ‘ಮುಗ್ಧ ಮಕ್ಕಳ ತಂದೆ ತಾಯಿಯನ್ನು ಕಸಿದುಕೊಳ್ಳುವವರೇ, ಧರ್ಮದ ಹೆಸರಿನಲ್ಲಿ ಮುಗ್ಧರನ್ನು ಕೊಲ್ಲುವವರೇ, ನಾಳೆ ನಿಮ್ಮನ್ನು ಇದೇ ಮಕ್ಕಳು ಪ್ರಶ್ನಿಸುತ್ತಾರೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದೇ ವಿಡಿಯೋವನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಪರಿಶೀಲಿಸಲು, ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜುಲೈ 2, 2020ರಂದು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಲಾದ ವಿಡಿಯೋ ಲಭ್ಯವಾಗಿದೆ.

ANI ಸುದ್ದಿ ಸಂಸ್ಥೆ 2020ರಲ್ಲಿ ಈ ಬಗ್ಗೆ ಒಂದು ಟ್ವೀಟ್ ಮಾಡಿರುವುದು ಲಭ್ಯವಾಗಿದೆ. ಇದರ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೋಪೋರ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂರು ವರ್ಷದ ಮಗುವನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದರು. ಆ ಮಗು ತನ್ನ ಸತ್ತ ಸಂಬಂಧಿಕರ ಬಳಿ ಕುಳಿತಿತ್ತು ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತನ್ನ ಅಪ್ಪ-ಅಮ್ಮನನ್ನು ಹುಡುಕುತ್ತಿರುವ ಮಗುವಿನ ವಿಡಿಯೋ ಎಂದು 2020ರಲ್ಲಿ ನಡೆದ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಈಗಿನ ಘಟನೆಗೆ ಲಿಂಕ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಬುದ್ದಿಮಾಂದ್ಯ ತಂದೆಯ ಆರೈಕೆ ಮಾಡುತ್ತಿರುವ ಮಗಳ ವಿಡಿಯೋವನ್ನು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights