FACT CHECK | 2020ರ ಹಳೆಯ ವಿಡಿಯೋವನ್ನು ಪಹಲ್ಗಾಮ್ ಘಟನೆಗೆ ಲಿಂಕ್ ಮಾಡಿ ಹಂಚಿಕೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಜನಪ್ರಿಯ ಪ್ರವಾಸಿ ತಾಣದ ಮೇಲೆ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಬಂದವರಾಗಿದ್ದರು. 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಈ ಸಂದರ್ಭದಲ್ಲಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆಯು ಪ್ರತೀಕಾರ ತೀರಿಸಿಕೊಂಡಿದೆ ಎಂದು ಹೇಳುವ ಫಿರಂಗಿ ಶೆಲ್ ದಾಳಿಯನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಎಪ್ರಿಲ್ 23, 2025 ರಂದು ಈ ವೀಡಿಯೊವನ್ನು ಹಂಚಿಕೊಂಡು, ‘‘LOC ನಿಯಂತ್ರಣ ರೇಖೆಯ ತಟ್ಟಪಾನಿ ಸೆಕ್ಟರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಭಾರೀ ಗುಂಡಿನ ದಾಳಿ.’’ ಎಂದು ಬರೆದುಕೊಂಡಿದ್ದಾರೆ. (Archive)

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಕೀ ಫ್ರೇಮ್‌ಗಳನ್ನು ಗೂಗಲ್ ರಿವರ್ರ್ಸ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2020 ರಲ್ಲಿ ಹಲವು ಫೇಸ್‌ಬುಕ್ ಬಳಕೆದಾರರು ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿರುವುದು ಲಭ್ಯವಗಿದೆ.

ಜೂನ್ 14, 2020 ರಂದು ರಿಪಬ್ಲಿಕ್ ಭಾರತ್ ಪ್ರಕಟಿಸಿದ ವೀಡಿಯೊದಲ್ಲಿ ಫಿರಂಗಿ ಶೆಲ್ ದಾಳಿಯ ಅದೇ ದೃಶ್ಯಗಳನ್ನು ನಾವು ಕಂಡುಕೊಂಡಿದ್ದೇವೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘನೆಗಳಿಗೆ ಭಾರತೀಯ ಸೇನೆಯ ಬಲವಾದ ಪ್ರತಿಕ್ರಿಯೆಯನ್ನು ಈ ವೀಡಿಯೊ ಒಳಗೊಂಡಿದೆ.

 2020 ರಲ್ಲಿ ಕದನ ವಿರಾಮ ಉಲ್ಲಂಘನೆ :

ಏಪ್ರಿಲ್ 23, 2025 ರಂದು ರಂದು ನ್ಯೂಸ್ 18 ವರದಿಯ ಪ್ರಕಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಸೇನೆ ಮತ್ತು ಇತರ ಭದ್ರತಾ ಪಡೆಗಳಿಗೆ ಪ್ರತೀಕಾರದ ಕಾರ್ಯಾಚರಣೆಗಳನ್ನು ನಡೆಸಲು ಮುಕ್ತ ಹಸ್ತ ನೀಡಲಾಗಿದೆ. ಸಂಬಂಧಿತ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನಿ ಸೇನೆಯು ಪೂಂಚ್‌ನ ತಟ್ಟಪಾನಿ ಪ್ರದೇಶದಲ್ಲಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಭಾರತೀಯ ಸೇನೆಯಿಂದ ಬಲವಾದ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಏತನ್ಮಧ್ಯೆ, ಪ್ರತ್ಯೇಕ ಘಟನೆಯಲ್ಲಿ, ಬಾರಾಮುಲ್ಲಾ ಜಿಲ್ಲೆಯ ಉರಿ ನಾಲಾ ಬಳಿಯ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ 2 ರಿಂದ 3 ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದ್ದಾರೆ ಎಂದು ಭಾರತೀಯ ಸೇನೆ ವರದಿ ಮಾಡಿದೆ. ಇಲ್ಲಿ ಗುಂಡಿನ ಚಕಮಕಿ ನಡೆಯಿತು ಮತ್ತು ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಆದಾಗ್ಯೂ, ಪೂಂಚ್‌ನ ತಟ್ಟಪಾನಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆಗೆ ಪ್ರತೀಕಾರವಾಗಿ ಹನ್ನೆರಡು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸುವ ಯಾವುದೇ ವಿಶ್ವಾಸಾರ್ಹ ವರದಿಗಳು ನಮಗೆ ಕಂಡುಬಂದಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆಯು ಪ್ರತೀಕಾರ ತೀರಿಸಿಕೊಂಡಿದೆ ಎಂದು 2020ರ ಹಳೆಯ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪುಟ್ಟ ಬಾಲಕನೊಬ್ಬ ತನ್ನ ತಂದೆಯ ಶವದ ಮುಂದೆ ಅಳುತ್ತಿರುವ ವಿಡಿಯೋ ಪಹಲ್ಗಾಮ್ ಘಟನೆಗೆ ಸಂಬಂಧಿಸಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights