FACT CHECK | ಭಾರತಕ್ಕೆ ಎಚ್ಚರಿಕೆ ನೀಡಿದ್ರಾ ಇಮ್ರಾನ್ ಖಾನ್?

ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಯ ನಂತರ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಈ ವಿಡಿಯೋದಲ್ಲಿ ಇಮ್ರಾನ್ ಖಾನ್ ಭಾರತಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನಿಷ್ಠ 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ, ಭಾರತ ಪಾಕಿಸ್ತಾನದ ವಿರುದ್ದ ಸಮರವನ್ನೆ ಸಾರಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿಡಿಯೋವೊಂದು ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು ಭಾರತ  ದಾಳಿ ಮಾಡಿದರೆ ಪಾಕಿಸ್ತಾನದ  “ಪ್ರತಿಕಾರ”  ಎಂದು ಪ್ರತಿಜ್ಞೆ ಮಾಡುವ 38 ಸೆಕೆಂಡುಗಳ ವಿಡಿಯೋ ಪ್ರಸಾರವಾಗುತ್ತಿದೆ.

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವಾಗ, ಇಮ್ರಾನ್ ಖಾನ್ ಅವರ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಇಮ್ರಾನ್ ಖಾನ್ ಭಾರತಕ್ಕೆ ಎಚ್ಚರಿಕೆ ನೀಡುತ್ತಿದ್ದು, ಪಾಕಿಸ್ತಾನ ಪ್ರತಿದಾಳಿ ನಡೆಸುವುದಾಗಿ ಹೇಳುತ್ತಿದ್ದಾರೆ.

@tayyabaraja_ ಎಂಬ ಎಕ್ಸ್‌ ಬಳಕೆದಾರರು ತಮ್ಮ ಎಕ್ಸ್‌ ಖಾತೆಯಲ್ಲಿ ಇಮ್ರಾನ್ ಖಾನ್ ಅವರ ವಿಡಿಯೋವನ್ನು ಹಂಚಿಕೊಂಡಿದ್ದು, ಪಾಕಿಸ್ತಾನ ಪ್ರತೀಕಾರದ ಬಗ್ಗೆ ಮಾತ್ರ ಯೋಚಿಸುವುದಿಲ್ಲ, ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಪಾಕಿಸ್ತಾನ ಜಿಂದಾಬಾದ್. ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಪೋಸ್ಟ್‌ ಮಾಡಿದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಇಮ್ರಾನ್ ಖಾನ್, “ಪಾಕಿಸ್ತಾನ ಕೇವಲ ಪ್ರತಿಕ್ರಿಯೆ ಬಗ್ಗೆ ಯೋಚಿಸುವುದಿಲ್ಲ, ಪಾಕಿಸ್ತಾನ ಪ್ರತಿದಾಳಿ ಮಾಡುತ್ತದೆ ” ಎಂದು ಹೇಳಿದ್ದಾರೆ. ಇದನ್ನು @YousafSaeedPTI ಎಂಬ ಎಕ್ಸ್‌ ಖಾತೆಯ ಬಳಕೆದಾರರು ಹಂಚಿಕೊಂಡಿದ್ದಾರೆ. ಅವರಲ್ಲದೆ, ಇನ್ನೂ ಅನೇಕ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  2023 ರಲ್ಲೇ ಎಕ್ಸ್‌ನಲ್ಲಿ ಪ್ರಕಟವಾಗಿರುವುದು ಪೋಸ್ಟ್‌ ಲಭ್ಯವಾಗಿದೆ.

ವಾಯ್ಸ್ ಆಫ್ ಅಮೆರಿಕ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 6 ವರ್ಷಗಳ ಹಿಂದೆ ಈ ವಿಡಿಯೋವನ್ನು ಅಪ್‌ಲೋಡ್ ಮಾಡಿರುವುದು ಲಭ್ಯವಾಗಿದೆ. 2019ರಲ್ಲಿ ಈ ವಿಡಿಯೋವನ್ನು ಪ್ರಕಟಿಸಲಾಗಿತ್ತು. ಆಗ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿದ್ದರು. ಭಾರತವು ಅವರ ವಿರುದ್ಧ ಮಿಲಿಟರಿ ಕ್ರಮ ಕೈಗೊಂಡರೆ, ಅವರ ದೇಶವು ತಕ್ಷಣವೇ ಪ್ರತಿದಾಳಿ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆ ಸಮಯದಲ್ಲಿ, ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು. ಈ ದಾಳಿಯ ಸಂಚು ರೂಪಿಸಿದ ಆರೋಪ ಪಾಕಿಸ್ತಾನ ಮೂಲದ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ಮೇಲಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇಮ್ರಾನ್ ಖಾನ್ ಅವರ ವಿಡಿಯೋ 6 ವರ್ಷಗಳಷ್ಟು ಹಳೆಯದು ಎಂದು ತಿಳಿದುಬಂದಿದೆ. ಪುಲ್ವಾಮಾ ದಾಳಿಯ ಸಂದರ್ಭದಲ್ಲಿ ವಿಡಿಯೋವನ್ನು ಮಾಡಲಾಗಿತ್ತು. ಆದರೆ ಈಗ ಪಹಲ್ಗಾಮ್‌ ಘಟನೆಯನ್ನು ಗುರಿಯಾಗಿಸಿಕೊಂಡು ವಿಡಿಯೋವನ್ನು ಮತ್ತೆ ಹರಿಯಬಿಡಲಾಗಿದೆ.ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಾಕಿಸ್ತಾನದ ವಿಮಾನ ನಿಲ್ದಾಣದಲ್ಲಿ ಬೆಂಕಿ ದುರಂತ ಎಂದು 2024ರ ಹಳೆಯ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights