FACT CHECK | ಭಾರತ ಝೀಲಂ ನದಿಯಿಂದ ನೀರು ಬಿಟ್ಟ ಪರಿಣಾಮ POKಯಲ್ಲಿ ಪ್ರವಾಹ ಉಂಟಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ
ಭಾರತ ಝೀಲಂ ನದಿಯಿಂದ ಏಕಾಏಕಿ ನೀರು ಬಿಡುಗಡೆ ಮಾಡಿದ ಪರಿಣಾಮ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿತ್ತು.ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಪಾಕಿಸ್ತಾನದ ಪ್ರವಾಹದ್ದು ಎಂದು ಹೇಳಿಕೊಂಡು ವಿಡಿಯೋವೊಂದನ್ನು ಪ್ರಸಾರ ಮಾಡಲಾಗುತ್ತಿದೆ. ಝೀಲಂ ನದಿಯ ನೀರನ್ನು ಬಿಟ್ಟಿದ್ದರಿಂದಲೇ ಇದು ಸಂಭವಿಸಿದೆ ಎಂದು ಹೇಳಲಾಗಿದೆ.
Pakistan is flooded
— Kreately.in (@KreatelyMedia) April 27, 2025
ಕ್ರಿಯೇಟ್ಲಿ ಡಾಟ್ ಇನ್ ಎಂಬ ಹೆಸರಿನ ಎಕ್ಸ್ ಖಾತೆಯಿಂದ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ‘ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದೆ’ ಎಂದು ಹೇಳಲಾಗಿದೆ. ಪಹಲ್ಗಾಮ್‌ನಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಭಾರತವು ಝೀಲಂ ನದಿ ನೀರನ್ನು ಬಿಟ್ಟಿದ್ದರಿಂದ ಪ್ರವಾಹ ಸೃಷ್ಟಿಯಾಗಿದೆ ಎನ್ನುವ ಅರ್ಥದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ.
View this post on Instagram
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು ಅದನ್ನು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಇದು ಹಳೆಯ ವಿಡಿಯೋ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 10, 2023ರಿಂದಲೇ ಈ ವಿಡಿಯೋ ಆನ್‌ಲೈನ್‌ನಲ್ಲಿ ಲಭ್ಯವಿದೆ. ಅಲ್ಲದೆ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಗೆ ಯಾವುದೇ ಸಂಬಂಧವಿಲ್ಲ ಎಂದು ಗೊತ್ತಾಗಿದೆ.
ಆಗಸ್ಟ್ 23, 2023ರಂದು ಜುಲ್ಫಿ ಕರ್ ಕಿಯಾನಿ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿದ್ದು, ಅಜಾದ್ ಕಾಶ್ಮೀರ ಅಂದರೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಮುಝಫರಾಬಾದ್ ದೃಶ್ಯ ಎಂದು ಹೇಳಲಾಗಿದೆ. ಇದನ್ನು ವಿಲೇಜ್ ಗರ್ತಾಮಾ ಎಂಬ ಫೇಸ್‌ಬುಕ್ ಪೇಜ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.
ಪಹಲ್ಗಾಮ್ ಘಟನೆಯ ನಂತರ ಪ್ರತೀಕಾರವಾಗಿ ಭಾರತವು ಝೀಲಂ ನದಿಯ ನೀರನ್ನು ಏಕಾಏಕಿ ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿದ್ದರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಉಂಟಾಯಿತು ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಇತ್ತಿಚಿನದಲ್ಲ ಹಳೆಯದು ಎಂಬುದು ಸ್ಪಷ್ಟವಾಗಿದೆ.ಸುಮಾರು 8 ತಿಂಗಳಿನಿಂದಲೇ ಈ ವಿಡಿಯೋ ಅಂತರ್ಜಾಲದಲ್ಲಿ ಲಭ್ಯವಿದೆ ಎಂದು ತನಿಖೆಯಿಂದ ತಿಳಿದುಬಂದಿದೆ, ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುಳ್ಳು ಹೇಳಿಕೆಯೊಂದಿಗೆ ಇದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ದೃಢಪಟ್ಟಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಪಹಲ್ಗಾಮ್‌ನಲ್ಲಿ ಪಾಕ್ ಬೆಂಬಲಿತ ಭಯೋತ್ಪಾದಕರು ನಡೆಸಿದ ನಾಗರೀಕರ ಮೇಲಿನ ದಾಳಿ ಖಂಡಿಸಿ ಭಾರತವು ಝೀಲಂ ನದಿಯ ನೀರನ್ನು ಏಕಾಏಕಿ ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿದ್ದರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರವಾಹ ಉಂಟಾಯಿತು. ಆದರೆ ಇದನ್ನೆ ಆಧಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸಂಬಂಧವಿಲ್ಲ ಹಳೆಯ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಉತ್ತರ ಪ್ರದೇಶದ ಬಲರಾಂಪುರದಲ್ಲಿ ಬ್ರಾಹ್ಮಣ ಎಂಬ ಕಾರಣಕ್ಕೆ ಅರ್ಚಕ ಶತ್ರುಘ್ನ ದ್ವಿವೇದಿಯನ್ನು ಹತ್ಯೆ ಮಾಡಲಾಗಿದೆಯೇ?

