FACT CHECK | ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ವಿರೋಧ ಪಕ್ಷದ ನಾಯಕರು ಮಾತನಾಡಿಲ್ಲವೇ?
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಮತ್ತು ಸುಪ್ರಿಯಾ ಶ್ರೀನಾಟೆ ಯಾವುದೇ ರೀತಿಯಾದ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ವಿರೋಧ ಪಕ್ಷದ ನಾಯಕರ ಚಿತ್ರಗಳ ಕೊಲಾಜ್ ಅನ್ನು ಬಳಸಿಕೊಂಡು, ಇವರು ದಾಳಿಯನ್ನು ಖಡಿಸಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ.
ಏಪ್ರಿಲ್ 28, 2025ರಂದು ಭೂಪೇಂದ್ರ ಚೌಹಾಣ್ ಎಂಬ ಫೇಸ್ಬುಕ್ ಬಳಕೆದಾರ ಪೋಸ್ಟ್ನಲ್ಲಿ, ತರಕಾರಿ, ಹಣ್ಣುಗಳ ಮೇಲೆ ಹೆಸರು ಬರೆದಿಟ್ಟು ತೊಂದರೆ ಹೊಂದಿದ್ದವರು, ಧರ್ಮ ಕೇಳಿ ಮಾಡಿದ ಕೊಲೆಗಳ ಬಗ್ಗೆ ಮೌನ.. ಎಂದು ಬರೆದುಕೊಂಡು ವಿಷಯವು ಅವರ ಕಾರ್ಯಸೂಚಿಗೆ ಸರಿಹೊಂದಿದಾಗ ಅವರ ಸಂವೇದನೆ ಎಚ್ಚರಗೊಳ್ಳ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಮತ್ತು ಸುಪ್ರಿಯಾ ಶ್ರೀನಾಟೆಯವರ ಬಾಯಿಗೆ ಪ್ಲಾಸ್ಟರ್ ಹಾಕಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.
ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಭಯೋತ್ಪಾದಕರ ದಾಳಿ ನಡೆದ ಸಂಜೆ 6.19 ಕ್ಕೆ ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ವೊಂದು ಲಭ್ಯವಾಗಿದೆ.
जम्मू-कश्मीर के पहलगाम में हुए कायराना आतंकी हमले में पर्यटकों के मारे जाने और कई लोगों के घायल होने की ख़बर बेहद निंदनीय और दिल दहलाने वाली है।
मैं शोकाकुल परिवारों के प्रति गहरी संवेदनाएं व्यक्त करता हूं और घायलों के जल्द स्वस्थ होने की आशा करता हूं।
आतंक के खिलाफ पूरा देश…
— Rahul Gandhi (@RahulGandhi) April 22, 2025
ಇದರಲ್ಲಿ ಅವರು ” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ಖಂಡನೀಯ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಆಶಿಸುತ್ತೇನೆ. ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆಗಳನ್ನು ನೀಡುವ ಬದಲು, ಸರ್ಕಾರವು ಈಗ ಜವಾಬ್ದಾರಿಯನ್ನು ತೆಗೆದುಕೊಂಡು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು – ಇದರಿಂದ ಭವಿಷ್ಯದಲ್ಲಿ ಇಂತಹ ಅನಾಗರಿಕ ಘಟನೆಗಳು ಸಂಭವಿಸುವುದಿಲ್ಲ ಮತ್ತು ಮುಗ್ಧ ಭಾರತೀಯರು ಈ ರೀತಿ ಪ್ರಾಣ ಕಳೆದುಕೊಳ್ಳುವುದಿಲ್ಲ” ಎಂದು ಪೋಸ್ಟ್ನಲ್ಲಿ ಬರೆದುಕೊಂಡಿರುವುದು ಕಂಡು ಬಂದಿದೆ.

ಇನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಹೇಳಿಕೆಯ ಕುರಿತು ಸರ್ಚ್ ಮಾಡಿದಾಗ, “ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡಿನ ಕೃತ್ಯ. ನಿರಾಯುಧ ಮತ್ತು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡಿರುವುದು ಮಾಡಿರುವ ಆಮಾನವೀಯ ಕೃತ್ಯ. ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದ್ದು, ಇದನ್ನು ಬಲವಾಗಿ ಖಂಡಿಸುತ್ತದೆ. ವರದಿಗಳ ಪ್ರಕಾರ, ಈ ದಾಳಿಯಲ್ಲಿ ಅನೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಿಯಾಂಕ ಗಾಂಧಿ ಅವರು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.
जम्मू-कश्मीर के पहलगाम में आतंकी हमले की भयावह तस्वीरें दिल दहला देनेवाली हैं। ये हमला हर दृष्टिकोण से निंदनीय है।
घायलों के शीघ्रातिशीघ्र उपचार के लिए देश की सबसे अच्छी चिकित्सा सेवाएं और सुविधाएं तत्काल सुनिश्चित की जाएं। सबके स्वास्थ्य लाभ और जीवन के लिए हृदय से कामना।… pic.twitter.com/bXlwAc9FvL
— Akhilesh Yadav (@yadavakhilesh) April 22, 2025
ಇನ್ನು ಅಖಿಲೇಶ್ ಯಾದವ್ ಅವರು ಈ ಕುರಿತು ಏನು ಪೋಸ್ಟ್ ಮಾಡಿದ್ದಾರೆ ಎಂದು ಪರಿಶೀಲನೆ ನಡೆಸಲು ನಾವು ಮುಂದಾದೆವು. ಈ ವೇಳೆ ನಮಗೆ ಏಪ್ರಿಲ್ 22 ರಂದು ಅವರ ಎಕ್ಸ್ನಲ್ಲಿ ಹಂಚಿಕೊಂಡ ಪೋಸ್ಟ್ ಕಂಡು ಬಂದಿದೆ. ಅದರಲ್ಲಿ ” “ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಭಯಾನಕ ಚಿತ್ರಗಳು ಹೃದಯವಿದ್ರಾವಕವಾಗಿವೆ. ಈ ದಾಳಿ ಖಂಡನೀಯ. ಗಾಯಾಳುಗಳಿಗೆ ತ್ವರಿತ ಚಿಕಿತ್ಸೆ ನೀಡಲು ದೇಶದ ಅತ್ಯುತ್ತಮ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳನ್ನು ತಕ್ಷಣವೇ ಖಚಿತಪಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರವು ಮೊದಲು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು, ಆಗ ಮಾತ್ರ ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರ ಜೀವನ ಸುರಕ್ಷಿತವಾಗಿರಲು ಸಾಧ್ಯ.” ಎಂದು ಬರೆದುಕೊಂಡಿರುವುದು ಕಂಡು ಬಂದಿದೆ.
जम्मू-कश्मीर के पहलगाम में आतंकियों ने जिस बर्बरता से पर्यटकों की हत्या की है, उससे रूह काँप जाये
इस कायराना हरकत के ख़िलाफ़ पूरा देश एकजुट हो कर खड़ा है – इस देश के ख़िलाफ़ आँख उठा कर देखने वाले यह याद रखें कि यह देश हर बार आतंकवाद के ख़िलाफ़ जीता है
मोदी सरकार जम्मू-कश्मीर…
— Supriya Shrinate (@SupriyaShrinate) April 22, 2025
ಇನ್ನು ಸುಪ್ರಿಯಾ ಶ್ರೀನಾಟೆ ಅವರು ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ವಿಪಕ್ಷದ ಇನ್ನೂ ಹಲವು ನಾಯಕರು ಉಗ್ರರ ದಾಳಿಯನ್ನು ಖಂಡಿಸಿರುವುದು ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ಹೀಗಾಗಿ ವೈರಲ್ ಪೋಸ್ಟ್ ಆಧಾರ ರಹಿತವಾಗಿದ್ದು, ಸುಳ್ಳು ನಿರೂಪಣೆಯಿಂದ ಕೂಡಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಲಲಾಗುತ್ತಿರುವ ರೀತಿ ವಿಪಕ್ಷದ ನಾಯಕರುಗಳಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ, ಅಖಿಲೇಶ್ ಯಾದವ್, ಸೇರಿದಂತೆ ಹಲವರು ಉಗ್ರರ ದಾಳಿಯನ್ನು ಖಂಡಿಸಿಲ್ಲ ಎಂಬುದು ಸುಳ್ಳು, ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಭಾರತ ಝೀಲಂ ನದಿಯಿಂದ ನೀರು ಬಿಟ್ಟ ಪರಿಣಾಮ POKಯಲ್ಲಿ ಪ್ರವಾಹ ಉಂಟಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

