FACT CHECK | ಪಾಕ್ ವಿರುದ್ದ ಯುದ್ದಕ್ಕೆ ಹೊರಟ ಭಾರತೀಯ ಸೈನಿಕರಿಗೆ ಸಲ್ಯೂಟ್ ಹೊಡೆಯುತ್ತಿರುವ ಯುವತಿಯ ವಿಡಿಯೋ! ವಾಸ್ತವವೇನು?

ಯುವತಿಯೊಬ್ಬಳು ಸೈನಿಕರ ವಾಹನದ ಕಡೆಗೆ ನಿಂತು ಸಲ್ಯೂಟ್‌ ಮಾಡುತ್ತಿರುವ ವಿಡಿಯೋ ಸಾಮಾಝಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭವಾಗುತ್ತಿದೆ ಮತ್ತು ಒರ್ವ ಹುಡುಗಿ ಯುದ್ಧಕ್ಕೆ ಹೋಗುವ ಸೈನಿಕರಿಗೆ ಸೆಲ್ಯೂಟ್ ಮಾಡುತ್ತಿದ್ದಾಳೆ ಎಂದು ಹೇಳಲಾಗುತ್ತಿದೆ. ವೀಡಿಯೊದಲ್ಲಿ ಕೆಲವು ಟ್ಯಾಂಕ್‌ಗಳು ರಸ್ತೆಯಲ್ಲಿ ಹಾದುಹೋಗುತ್ತಿರುವುದನ್ನು ಕಾಣಬಹುದು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿದೆ.

ಏಪ್ರಿಲ್ 30, 2025 ರಂದು ಫೇಸ್​ಬುಕ್ ಬಳಕೆದಾರರೊಬ್ಬರು  ಈ ವಿಡಿಯೋವನ್ನು ಹಂಚಿಕೊಂಡು, ‘‘ಯುದ್ಧ ವಾತಾವರಣದಲ್ಲಿ ಸೈನ್ಯದ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಪ್ರತಿಯೊಬ್ಬ ನಿಜವಾದ ಭಾರತೀಯನ ಆದ್ಯ ಕರ್ತವ್ಯ.. ಈ ಬೈಕ ಸಹೋದರಿಗೆ ನನ್ನ ಸೆಲ್ಯೂಟ್.! ಜೈ ಶ್ರೀ ರಾಮ್’’ ಎಂದು ಬರೆದುಕೊಂಡಿದ್ದಾರೆ. ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಶೀಲಿಸಲು, ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗದು ಗೂಗಲ್ ಸರ್ಚ್ ಮಾಡಿದಾಗ, ಜನವರಿ 15, 2025 ರಂದು . ಬೈಕರ್ ಗರ್ಲ್ ಕಾಂಚನ್ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ ಮೂಲ ವಿಡಿಯೋ ಲಭ್ಯವಾಗಿದೆ.

 

View this post on Instagram

 

A post shared by Kanchan Ugursandi (@bikergirlkanchan)

ಈ ವೀಡಿಯೊ ಜೊತೆಗೆ ಅವರು ‘‘ಇಂದು ಸೇನಾ ದಿನ- ಈ ಸಂದರ್ಭದಲ್ಲಿ, ಭಾರತೀಯ ಸೇನೆಯ ಸೈನಿಕರು, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಿಮ್ಮ ತ್ಯಾಗ ಮತ್ತು ಶೌರ್ಯ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ’’ ಎಂದು ಬರೆದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಮುನ್ನವೇ ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಆದರೆ ಈ ವೀಡಿಯೊವನ್ನು ಇತರೆ ಭಾಷೆಗಳಲ್ಲಿ ಕೂಡ ಪಹಲ್ಗಾಮ್ ದಾಳಿಗೆ ಲಿಂಕ್ ಮಾಡಿ ಹಂಚಿಕೊಳ್ಳಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಶುರುವಾಗುತ್ತಿದೆ, ಮಹಿಳಾ ಬೈಕರ್ ಒಬ್ಬರು ಯುದ್ಧಕ್ಕೆ ಹೋಗುವ ಸೈನಿಕರಿಗೆ ಸೆಲ್ಯೂಟ್ ಮಾಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊ ಸುಳ್ಳು. ಈ ವಿಡಿಯೋ ಹಳೆಯದಾಗಿದ್ದು, ಸೇನಾ ದಿನದ ಸಂದರ್ಭದಲ್ಲಿ ಮಹಿಳಾ ಬೈಕರ್ ಒಬ್ಬರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮೂತ್ರ ಕುಡಿದು ಮೊಣಕಾಲಿನ ನೋವು ನಿವಾರಿಸಿಕೊಂಡ ನಟ ಪರೇಶ್ ! ಮೂತ್ರ ಕುಡುದ್ರೆ ಆರೋಗ್ಯ ಸುಧಾರಣೆ ಆಗತ್ತಾ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights