FACT CHECK | ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲಾದ ಸೇತುವೆ ಎಂದು ಸಿಂಗಾಪುರದ ಫೋಟೊ ಹಂಚಿಕೆ

ವನ್ಯ ಜೀವಿಗಳಿಗೆ ತೊಂದರೆಯಾಗದಂತೆ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ರಸ್ತೆಯ ಮಧ್ಯೆ ಮೇಲ್ಸೇತುವೆಯನ್ನು ಕಾಣಬಹುದು. ಈ ಮೇಲ್ಸೇತುವೆ ಹುಲ್ಲು ಮತ್ತು ಮರಗಳಿಂದ ಆವೃತವಾಗಿದೆ. ಈ ಫೋಟೋವನ್ನು ಹಂಚಿಕೊಂಡ ಅನೇಕ ಬಳಕೆದಾರರು, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಾಣಿಗಳ ಚಲನೆಗಾಗಿ ಈ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, ‘‘ನಮ್ಮ ದೇಶ ಬದಲಾಗುತ್ತಿದೆ.. ಭಾರತದ ಮೊದಲ ಪ್ರಾಣಿ ಸೇತುವೆ ಅನ್ನು ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇಯಲ್ಲಿ ನಿರ್ಮಿಸಲಾಗಿದೆ. ಪ್ರಾಣಿಗಳು ಡಿಕ್ಕಿ ಹೊಡೆಯದಂತೆ ರಕ್ಷಿಸಲು ಇದನ್ನು ನಿರ್ಮಿಸಲಾಗಿದೆ’’ ಎಂದು ಬರೆದುಕೊಂಡಿದ್ದಾರೆ.  ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ಫೋಟೋವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವಸ್F ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, Reddit ನಲ್ಲಿ ಹಂಚಿಕೊಂಡ ಇದೇ ರೀತಿಯ ಚಿತ್ರ ಲಭ್ಯವಾಗಿದೆ. ಇದನ್ನು 9 ವರ್ಷದ ಹಿಂದೆ ಅಪ್ಲೋಡ್ ಮಾಡಲಾಗಿದೆ. ವಿವರಣೆಯ ಪ್ರಕಾರ, ಇದು ಸಿಂಗಾಪುರದಲ್ಲಿರುವ The Eco-Link@BKE ಸೇತುವೆಯ ಫೋಟೋ. ಹಾಗೆಯೆ allthatsinteresting.com ನಲ್ಲಿಯೂ ಇದೇ ಫೋಟೋ ಕಂಡುಕೊಂಡಿದ್ದೇವೆ. ಇದರಲ್ಲಿ ಕೂಡ ಈ ಫೋಟೋ ಸಿಂಗಾಪುರದ್ದು ಎಂದು ಹೇಳಲಾಗಿದೆ.

ಈ ಮಾಹಿತಿಯ ಆಧಾರದ ಮೇಲೆ ಮತ್ತಷ್ಟು ಸರ್ಚ್ ಮಾಡಿದಾಗ ,ದಿ ಡ್ರೈವ್ ಮತ್ತು ಟುಡೇಆನ್‌ಲೈನ್ ಪ್ರಕಟಿಸಿದ ಮಾಧ್ಯಮ ವರದಿಗಳು ಲಭ್ಯವಾಗಿವೆ. ಈ ಎರಡೂ ವರದಿಗಳ ಪ್ರಕಾರ, ಹೆದ್ದಾರಿಯಲ್ಲಿ ವೇಗವಾಗಿ ಚಲಿಸುವ ವಾಹನಗಳಿಂದಾಗಿ ಅನೇಕ ಪ್ರಾಣಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿವೆ. ಆದ್ದರಿಂದ, ಈ ಸೇತುವೆಯನ್ನು ಸಿಂಗಾಪುರದಲ್ಲಿ ಪ್ರಾಣಿಗಳು ರಸ್ತೆ ದಾಟಲು ನಿರ್ಮಿಸಲಾಗಿದೆ. ಇದನ್ನು 2011 ಮತ್ತು 2013 ರ ನಡುವೆ ನಿರ್ಮಿಸಲಾಯಿತು ಎಂದು ಬರೆಯಲಾಗಿದೆ. ಈ ಎರಡು ಸುದ್ದಿಗಳಲ್ಲಿ ವೈರಲ್ ಫೋಟೋಕ್ಕೆ ಹೋಲಿಕೆಯಾಗುವ ಮತ್ತೊಂದು ಆ್ಯಂಗಲ್​ನ ಫೋಟೋ ಕಾಣಬಹುದು.

ಯೂಟ್ಯೂಬ್​ನಲ್ಲಿ ಸರ್ಚ್ ಮಾಡಿದಾಗ, ಅಕ್ಟೋಬರ್ 8, 2017 ರಂದು LET ME KNOW ಹೆಸರಿನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ. ಇದರಲ್ಲಿ ಅದೇ ವೈರಲ್ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ವೀಡಿಯೊದ ವಿವರಣೆಯು ಸಿಂಗಾಪುರದಲ್ಲಿ ಪ್ರಾಣಿಗಳು ಸುಲಭವಾಗಿ ರಸ್ತೆ ದಾಟಲು ಪ್ರಾಣಿ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಹೇಳುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಭಾರತದ್ದಲ್ಲ ಎಂಬುದು ಸ್ಪಷ್ಟವಾಗಿದೆ. ವಾಸ್ತವವಾಗಿ ಈ ಸೇತುವೆಯನ್ನು ಸಿಂಗಾಪುರದಲ್ಲಿ ನಿರ್ಮಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಹಿಂದೂ ಪಂಡಿತರು ಮಾಂಸಾಹಾರ ಆಹಾರ ಸೇವಿಸುತ್ತಿದ್ದಾರೆ ಎಂಬ ವೈರಲ್ ವಿಡಿಯೋದ ಅಸಲೀಯತ್ತೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights