FACT CHECK | ರಷ್ಯಾದಲ್ಲಿ ಸಂಭವಿಸಿದ ಸುನಾಮಿಯ ದೃಶ್ಯಗಳು ಎಂದು ಹಳೆಯ ವಿಡಿಯೋ ಹಂಚಿಕೆ

ಜುಲೈ 30, 2025 ರಂದು ರಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿತು, ಇದು ರಿಕ್ಟರ್ ಮಾಪಕದಲ್ಲಿ 8.8 ರಷ್ಟು ದಾಖಲಾಗಿತ್ತು. ಅದರ ನಂತರ ಸುನಾಮಿ ಅಪ್ಪಳಿಸಿತು. ಈ ಹಿನ್ನೆಲೆಯಲ್ಲಿ ರಷ್ಯಾದಲ್ಲಿ ಸಂಭವಿಸಿದ ಸುನಾಮಿಯ ದೃಶ್ಯಗಳು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ವೀಡಿಯೊ ವೈರಲ್ ಆಗಿದ್ದವು. ಇದೀಗ ಅಲೆಯೊಂದು ಬ್ರಿಡ್ಜ್ ದಾಟಿ ರಸ್ತೆಯಲ್ಲಿರುವ ಕಾರಿಗೆ ಅಪ್ಪಳಿಸುತ್ತಿರುವ ವೀಡಿಯೊವನ್ನು ಅನೇಕರು ಹಂಚಿಕೊಳ್ಳುತ್ತಿದ್ದು, ಇದು ರಷ್ಯಾದ್ದು ಎಂದು ಪ್ರತಿಪಾದಿಸುತ್ತಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ಅನೇಕ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಪ್ರಸಾರವಾಗುತ್ತಿರುವ ವಿಡಿಯೋದ ಕೆಲವು ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  ನವೆಂಬರ್ 27, 2023 ರಂದು ಹುರಿಯತ್ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ವರದಿಯಲ್ಲಿ ಈ ವಿಡಿಯೋದಲ್ಲಿ ಕೆಲ ಭಾಗವನ್ನು ನೋಡಬಹುದು.

ಪೂರ್ವ ಕಪ್ಪು ಸಮುದ್ರ ಪ್ರದೇಶದಲ್ಲಿ ಮಳೆಗೆ ಸಂಬಂಧಿಸಿದ ವಿಪತ್ತುಗಳ ಕುರಿತಾದ ವರದಿ ಇದರಲ್ಲಿದೆ. ಬಿರುಗಾಳಿಗಳಿಂದಾಗಿ ಕಪ್ಪು ಸಮುದ್ರದ ಕರಾವಳಿಯ ವಿವಿಧ ನಗರಗಳಲ್ಲಿ ಸಮುದ್ರದ ಉಬ್ಬರಗಳು ಸಂಭವಿಸಿವೆ ಮತ್ತು ಗಿರೆಸುನ್ ಟೈರ್ಬೋಲು ಕರಾವಳಿಯಲ್ಲಿ ಅಲೆಗಳು ರಸ್ತೆಗೆ ಅಪ್ಪಳಿಸಿವೆ ಎಂದು ವರದಿ ಹೇಳುತ್ತದೆ.

ಕೀವರ್ಡ್‌ಗಳನ್ನು ಬಳಸಿಕೊಂಡು ಮತ್ತಷ್ಟು ಸರ್ಚ್ ಮಾಡಿದಾಗ, ಅದೇ ವಿಡಿಯೋ ಲಭ್ಯವಾಗಿದ್ದು,  YouTube ಚಾನಲ್‌ನಲ್ಲಿಯೂ ಸಹ ನವೆಂಬರ್ 27, 2023 ರಂದು ಹಂಚಿಕೊಳ್ಳಲಾಗಿದೆ. ಬಿರುಗಾಳಿಗಳು ಮತ್ತು ದೊಡ್ಡ ಅಲೆಗಳಿಂದಾಗಿ ಗಿರೆಸುನ್‌ನ ಟೈರ್‌ಬೋಲುವಿನಲ್ಲಿ ಹಾನಿ ಸಂಭವಿಸಿದೆ ಎಂಬ ಮಾಹಿತಿ ಇದರಲ್ಲಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಜುಲೈ 30, 2025 ರಂದು ರಷ್ಯಾದಲ್ಲಿ ಸಂಭವಿಸಿದ ಭೂಕಂಪದ ನಂತರ ಸಂಭವಿಸಿದ ಸುನಾಮಿಗೆ ಸಂಬಂಧವನ್ನು ಹೊಂದಿಲ್ಲ ಮತ್ತು ಈ ವೀಡಿಯೊ 2023 ರಲ್ಲಿ ಟರ್ಕಿಯಲ್ಲಿ ಸಂಭವಿಸಿದ ಸುನಾಮಿಯದ್ದಾಗಿದೆ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಶ್ಚಿಮ ಬಂಗಾಳದಲ್ಲಿ ಹಿಂದೂ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights