FACT CHECK | ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ ಆರೋಪಿಯೊಂದಿಗೆ ಎಎಪಿ ಶಾಸಕನ ಫೋಟೋದ ಅಸಲೀಯತ್ತೇನು?
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮಧ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದು ಪ್ರಸಾರವಾಗುತ್ತಿದ್ದು, ‘ಬಳಕೆದಾರ ಹೀರಾ ಲಾಲ್’ ಎಂಬ ಫೇಸ್ಬುಕ್ ಬಳಕೆದಾರ 21 ಆಗಸ್ಟ್ 2025 ರಂದು ವೈರಲ್ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು “ಬಿಗ್ ಬ್ರೇಕಿಂಗ್ *ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ದಾಳಿ ಮಾಡಿದ ರಾಜೇಶ್ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ಎಂದು ತಿಳಿದುಬಂದಿದೆ* ದಾಳಿಕೋರ ಗುಜರಾತ್ ಆಮ್ ಆದ್ಮಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಗೋಪಾಲ್ ಇಟಾಲಿಯಾ ಅವರ ಸ್ನೇಹಿತ.. ಈ ದಾಳಿ ಕಾಕತಾಳೀಯವಲ್ಲ ಆದರೆ ಆಮ್ ಆದ್ಮಿ ಪಕ್ಷದ ಪಿತೂರಿ!” ಎಂಬ ಶೀರ್ಷಿಕೆಯೊಂದಿಗೆ ಬರೆದಿದ್ದಾರೆ.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದು, ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ಕೀವರ್ಡ್ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಆಗಸ್ಟ್ 20, 2025 ರಂದು ದೈನಿಕ್ ಜಾಗರಣ್ ವೆಬ್ಸೈಟ್ನಲ್ಲಿ ಪ್ರಕಟವಾದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಜೆಪಿ ಶಾಸಕ ಹರೀಶ್ ಖುರಾನಾ ತಮ್ಮ ಅಧಿಕೃತ X ಖಾತೆಯಲ್ಲಿ ವೈರಲ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು AAP ನಾಯಕ ಗೋಪಾಲ್ ಇಟಾಲಿಯಾ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಹರೀಶ್ ಖುರಾನಾಗೆ ಪ್ರತಿಕ್ರಿಯಿಸಿದ ಗೋಪಾಲ್ ಇಟಾಲಿಯಾ ಚಿತ್ರವನ್ನು ಎಡಿಟ್ ಮಾಡಿ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದಿದ್ದಾರೆ.

ವೈರಲ್ ಆಗಿರುವ ಫೋಟೋದ ಸತ್ಯಾಸತ್ಯತೆಯನ್ನು ತಿಳಿಯಲು, ವೈರಲ್ ಚಿತ್ರವನ್ನು Google Reverse Image ಸಹಾಯದಿಂದ ಸರ್ಚ್ ಮಾಡಿದಾಗ, ಗೋಪಾಲ್ ಇಟಾಲಿಯಾ ಅವರ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ನಮಗೆ ಮೂಲ ವಿಡಿಯೋ ಲಭ್ಯವಾಗಿದೆ. ಈ ವಿಡಿಯೋವನ್ನು ಆಗಸ್ಟ್ 2, 2025 ರಂದು ಹಂಚಿಕೊಳ್ಳಲಾಗಿದೆ. ಗೋಪಾಲ್ ಇಟಾಲಿಯಾ ಜೊತೆ ಬೇರೊಬ್ಬರು ನಿಂತಿರುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು. ಅಲ್ಲದೆ, ಹಿಂದಿನ ಹಿನ್ನೆಲೆ ನಿಖರವಾಗಿ ವೈರಲ್ ವೀಡಿಯೊದಂತೆಯೇ ಇದೆ.

ಆಗಸ್ಟ್ 22, 2025 ರಂದು ದೈನಿಕ್ ಭಾಸ್ಕರ್ ಅವರ ವೆಬ್ಸೈಟ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಆಗಸ್ಟ್ 20 ರಂದು ಬೆಳಿಗ್ಗೆ 8.15 ರ ಸುಮಾರಿಗೆ ಸಾರ್ವಜನಿಕ ವಿಚಾರಣೆಯ ಸಮಯದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಆರೋಪಿ ಅವರ ಕೂದಲನ್ನು ಎಳೆದು ನಂತರ ಕಪಾಳಮೋಕ್ಷ ಮಾಡಿದ್ದ. ಆರೋಪಿ ಗುಜರಾತ್ನ ರಾಜ್ಕೋಟ್ ನಿವಾಸಿ ರಾಜೇಶ್ಭಾಯ್ ಖಿಮ್ಜಿ, ಅವರನ್ನು ತಕ್ಷಣ ಬಂಧಿಸಲಾಯಿತು. ಆರೋಪಿಯನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ರಾಜೇಶ್ ವಿರುದ್ಧ ಗುಜರಾತ್ನಲ್ಲಿ ಇರಿತ ಸೇರಿದಂತೆ 5 ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ, ಬಂಧನದ ಸಮಯದಲ್ಲಿ ಅವರ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ. ಗುಪ್ತಚರ ಇಲಾಖೆ ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕ ಅವರನ್ನು ವಿಚಾರಣೆ ನಡೆಸುತ್ತಿದೆ.”
हरीश खुराना जी, आप की ख़ुद की तो किसी ट्रोलर से ज़्यादा इज्जत है नहीं लेकिन ऐसी घटिया हरकत करने से पहले अपने पिताजी मदनलाल जी की इज्जत की तो परवाह कर लेते?
दो रूपिये Per ट्वीट के हिसाब से काम कर रहे भाजपाई छुटभैये से भी निम्न स्तर के आप के कारनामे देखकर स्वर्गीय मदनलाल खुराना… https://t.co/KjeG09XACl
— Gopal Italia (@Gopal_Italia) August 20, 2025
ಒಟ್ಟಾರೆಯಾಗಿ ಹೇಳುವುದಾದರೆ, ಸಿಎಂ ರೇಖಾ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯೊಂದಿಗೆ ಗೋಪಾಲ್ ಇಟಾಲಿಯಾ ಅವರ ವೈರಲ್ ಫೋಟೋವನ್ನು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ. ವಾಸ್ತವವಾಗಿ ವೈರಲ್ ಫೋಟೋವನ್ನು ಎಎಪಿ ಶಾಸಕರ ವೀಡಿಯೊದಿಂದ ಸ್ಕ್ರೀನ್ಶಾಟ್ ತೆಗೆದುಕೊಂಡು ಅದನ್ನು ಸಂಪಾದಿಸುವ ಮೂಲಕ ರಚಿಸಲಾಗಿದೆ, ಅದನ್ನು ಈಗ ತಪ್ಪು ರೀತಿಯಲ್ಲಿ ಹಂಚಿಕೊಳ್ಳಲಾಗುತ್ತಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ದುರದೃಷ್ಟವಷಾತ್ ನಾನು ಸಂಸದನಾದೆ ಎಂದು ಹೇಳಿದ್ರಾ ರಾಹುಲ್ ಗಾಂಧಿ?

