FACT CHECK : ಸೋನಿಯಾ ಗಾಂಧಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ರಾ ಪಧಾನಿ ಮೋದಿ?

ಇತ್ತೀಚಿಗೆ ಕಾಂಗ್ರೆಸ್ ನಾಯಕಿ ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇರದ ಬೆನ್ನಲ್ಲೆ  ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಕಾಂಗ್ರೆಸ್‌ ನಾಯಕಿಯ ಆರೋಗ್ಯ ವಿಚಾರಿಸಲು ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

May be an image of hospital and text that says "06:00AM 30/03/2026 stryker str er MMAUT HEMRAM"

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಾರ್ಚ್ 24ರಂದು ವಿಪರೀತ ಜ್ವರದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿಯವರನ್ನುದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ಒಂದು ಫೋಟೋ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಫೋಟೋದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದಾರೆ.

ಹಾಗಿದ್ದರೆ ಈ ಪೋಸ್ಟ್‌ನ ಫೋಟೊದಲ್ಲಿ ಹಂಚಿಕೊಂಡಿರುವಂತೆ, ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿಯನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿರುವುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆಯನ್ನು ಪರಿಶೀಲಿಸಲು ಫೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಚೆಕ್ ಮಾಡಿದಾಗ, ಈ ಫೋಟೋ ನಕಲಿ ಆಗಿದ್ದು, AI (ಕೃತಕ ಬುದ್ಧಿಮತ್ತೆ) ಮೂಲಕ ಸೃಷ್ಟಿಸಲಾದ ಚಿತ್ರವಾಗಿದೆ.

ಚಿತ್ರವನ್ನು ವಿಶ್ಲೇಷಿಸಿದಾಗ ಮುಖದ ವಿನ್ಯಾಸ, ಕೈಗಳ ಆಕಾರ ಮತ್ತು ಹಿನ್ನಲೆಯಲ್ಲಿ ಅಸಹಜ (unnatural) ಲಕ್ಷಣಗಳು ಕಂಡುಬರುತ್ತವೆ. AI ಡಿಟೆಕ್ಷನ್ ಸಾಧನಗಳು ಈ ಚಿತ್ರವನ್ನು ಸಿಂಥೆಟಿಕ್ (Artificially generated) ಎಂದು ಗುರುತಿಸಿವೆ. ವಿಶ್ವಾಸಾರ್ಹ ಮಾಧ್ಯಮಗಳಲ್ಲಿ Narendra Modi ಅವರು Sonia Gandhi ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಗ್ಗೆ ಯಾವುದೇ ವರದಿ ಇಲ್ಲ.

AI-detection tool Hive Moderation concluded that the -image was AI-generated.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೋ ನೈಜ ಚಿತ್ರಲ್ಲ. ಇದು AI ಮೂಲಕ ನಿರ್ಮಿಸಿರುವ ನಕಲಿ ಚಿತ್ರ. ಚಿತ್ರದಲ್ಲಿ ತೋರಿಸಿದಂತೆ ಸೋನಿಯಾ ಗಾಂಧಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights