ಹಾಡಹಗಲೇ ನಾನಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷನ ಬರ್ಬರ ಕೊಲೆ : ಬೆಚ್ಚಿ ಬಿದ್ದ ಜನ!

ನಾನಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷನ ಬರ್ಬರ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

ದಾಮೂ ನಾಯಕ(55) ಕೊಲೆಯಾದ ದುರ್ದೈವಿ. ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿಯೇ ಕೊಲೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.