ಗೆದ್ದ ಶಾಸಕರಿಗೆ ಸಚಿವ ಸ್ಥಾನ ಪಕ್ಕಾ – ಬಿಎಸ್ ಯಡಿಯೂರಪ್ಪ ಘೋಷಣೆ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ನಾವು ಮಾತುಕೊಟ್ಟಂತೆ ಗೆದ್ದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಾದಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದ ಉಪ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವು ಹೈಕಮಾಂಡ್ ಗೆ ತೃಪ್ತಿ ತಂದಿದೆ. ಬಿಜೆಪಿ ಹೈಕಮಾಂಡ್ ಖುಷಿಯಾಗಿದ್ದಾರೆ. ನಿರೀಕ್ಷೆ ಮಾಡಿದಂತೆ ಫಲಿತಾಂಶದಲ್ಲಿ ಬಿಜೆಪಿ ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂತಹ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಗೆಲುವನ್ನು ಸಾಧಿಸುವ ಅಭ್ಯರ್ಥಿಗಳಿಗೆ ಉಪ ಚುನಾವಣೆಯ ಮುನ್ನವೇ ಸಚಿವ ಸ್ಥಾನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇವೆ. ಮಾತು ಕೊಟ್ಟಂತೆ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಘೋಷಣೆ ಮಾಡಿದರು.

Leave a Reply

Your email address will not be published.