ಬೆಂಗಳೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕಾಗಿ ಯಶ್ ಇಟ್ಟ ಮನವಿಗೆ ಅಸ್ತು ಎಂದ ಬಿಎಸ್ವೈ…

ರಾಕಿಂಗ್ ಸ್ಟಾರ್ ಯಶ್ ಬೇಡಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ 500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಬಿಎಸ್ವೈ ಹಸಿರು ನಿಶಾನೆ ತೊರಿಸಿದ್ದಾರೆ.

12ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಸಹ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಫಿಲಂ ಸ್ಟುಡಿಯೋ ಬಗ್ಗೆ ಮನವಿ ಮಾಡಿದ್ದರು.  ಸಿನಿಮೋತ್ಸವದಲ್ಲಿ ಮಾತನಾಡಿದ ಯಶ್, ”ಮುಖ್ಯಮಂತ್ರಿಗಳೇ…ನಮಗೊಂದು ಅತ್ಯುತ್ತಮ ಫಿಲಂ ಸ್ಟುಡಿಯೋ ನಿರ್ಮಿಸಿ ಕೊಡಿ..ಇಡೀ ಜಗತ್ತು ತಿರುಗಿ ನೋಡುವಂತೆ ಮಾಡುತ್ತೇವೆ. ನಮ್ಮ ಹುಡುಗರಿಗೆ ಶಕ್ತಿಯಿದೆ. ಸ್ವಲ್ಪ ಹುರಿದುಂಬಿಸಬೇಕು” ಎಂದು ಹೇಳಿದ್ದರು.

ಕರ್ನಾಟಕದಲ್ಲಿ ಹುಡುಗರಿಗೆ ತುಂಬಾನೇ ಕನಸು, ಹುರುಪು, ಶಕ್ತಿಯಿದೆ. ಹೀಗಾಗಿ ದೊಡ್ಡದಾಗಿ ಒಂದು ಸ್ಟುಡಿಯೋ ಕಟ್ಟಿಸಿ ಬಿಡಿ. ಕಾಲ ಕಾಲದಿಂದ ಬರೀ ಅಲ್ಲೊಂದಷ್ಟು ಎಕ್ರೆ ಬಂತಂತೆ, ಇಲ್ಲೊಂದಷ್ಟು ಎಕ್ರೆ ಬಂತಂತೆ. ಈ ಜಾಗ, ಆ ಜಾಗ ಅಂತ ಹೋಗ್ತಾನೇ ಇದೆ ಸರ್. ಎಲ್ಲೋ ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕು. ಹೀಗಾಗಿ ನಮಗೆ ಶಕ್ತಿ ಕೊಡಿ. ತೆರಿಗೆ ರೂಪದಲ್ಲಿ ಎಷ್ಟು ವಾಪಸ್ ಕೊಡ್ತೀವಿ ಅಂದ್ರೆ ತುಂಬಾ ಖುಷಿಯಾಗಿ ಬಿಡಬೇಕು. ಇದರಿಂದ ಇಡೀ ಉದ್ಯಮನೂ ಬೆಳೆಯುತ್ತದೆ. 70ನೇ ದಶಕದಲ್ಲಿ ಕನ್ನಡ ಚಿತ್ರರಂಗದ ಒಂದು ಯುಗ ಇತ್ತು ಅಂತ ನೀವು ಹೇಳಿದ್ರಿ. ಇದೀಗ ಆ ಕೆಲಸ ಮಾಡುವಂತಹ ಸಾಕಷ್ಟು ಹುಡುಗರು ಇಲ್ಲೇ ಇರುತ್ತಾರೆ. ಆದರೆ ಅವರಿಗೆ ಶಕ್ತಿ ತುಂಬಬೇಕಷ್ಟೆ ಎಂದು ಹೇಳಿದ್ದರು.

ಇದಕ್ಕೆ ಶೀಘ್ರ ಸ್ಪಂದಿಸಿದ ಮುಖ್ಯಮಂತ್ರಿಯವರು ಇಂದು ಬಜೆಟ್ ನಲ್ಲಿ 500 ಕೋಟಿ ಮೀಸಲಿರಿಸಿ ಬೆಂಗಳೂರಿನಲ್ಲಿ ಸ್ಟುಡಿಯೋ ಸ್ಥಾಪಿಸುವುದಾಗಿ‌ ಹೇಳಿದ್ದಾರೆ..!

ಇಂದಿನ ಬಜೆಟ್ ಮಂಡನೆ ವೇಳೆ ಈ ಬಗ್ಗೆ ಯಡಿಯೂರಪ್ಪ ಪ್ರಸ್ತಾಪ ಮಾಡಿದ್ದಾರೆ. ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕಾಗಿ ಈಗಾಗಲೇ ಸರ್ಕಾರ ಹೊಸ ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಮುಖ್ಯಮಂತ್ರಿಗಳ ಈ ಘೋಷಣೆಯಿಂದ ಕನ್ನಡ ಚಿತ್ರರಂಗದ ಸುದೀರ್ಘ ಕನಸು ಈಡೇರುವುದು ಕನ್ಫರ್ಮ್ ಆಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಯಾಂಡಲ್​ವುಡ್ ಮಂದಿ ಇತರೆ ರಾಜ್ಯಗಳ ಫಿಲಂ ಸ್ಟುಡಿಯೋಗಳನ್ನು ಅವಲಂಭಿಸುವುದು ಕೊನೆಗೊಳ್ಳಲಿದೆ.