ಕೇಂದ್ರ ಬಜೆಟ್ – ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು : 2022 ರ ವೇಳೆಗೆ ಎಲ್ಲ ಬಡವರಿಗೆ ಮನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡನೆ ಮಾಡಿರುವ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಸುದ್ದಿ ನೀಡಿದ್ದಾರೆ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಒದಗಿಸಲು ಆದ್ಯತೆ ನೀಡಲಾಗುತ್ತಿದ್ದು, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ.

ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.