ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ BSP ಕಾಂಗ್ರೆಸ್ ಗೆ ಬೆಂಬಲ ನೀಡಲಿದೆ : ಮಾಯಾವತಿ

‘ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಬಹುಜನ ಸಮಾಜ ಪಕ್ಷ ಬೆಂಬಲ ನೀಡಲಿದೆ ‘ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಬೆಳಿಗ್ಗೆ ಹೇಳಿದ್ದಾರೆ.

‘ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿಯೇ ನಾವು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ, ರಾಜಸ್ಥಾನದಲ್ಲಿಯೂ ನಾವು ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಣಯಿಸಿದ್ದೇವೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಾರದಿರದಂತೆ ಮಾಡಲು ನಾವು ಈ ಬಾರಿಯ ಚುನಾವಣೆ ಎದುರಿಸಿದ್ದೆವು ‘ ಎಂದು ಮಾಯಾವತಿ ಹೇಳಿದ್ದಾರೆ.

ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ 230 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114, ಬಿಜೆಪಿ 109 ಹಾಗೂ ಬಿಎಸ್ ಪಿ 2 ಸ್ಥಾನಗಳನ್ನು ಜಯಿಸಿವೆ. ಸರ್ಕಾರ ರಚಿಸಲು 116 ಸೀಟ್ ಗಳ ಅವಶ್ಯವಿದೆ.

Leave a Reply