ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಮನೆ ಮೇಲೆ ದಿಢೀರ್ ಐಟಿ ದಾಳಿ…!

ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಅವರ ವಾಗೀಶ್ ನಗರ 6ನೇ ಕ್ರಾಸ್ ಬಳಿ ಇರುವ ಮನೆಯಲ್ಲಿ 10 ಕೋಟಿ ಅಕ್ರಮ ಹಣ, ಮದ್ಯ ಇಟ್ಟಿರುವುದಾಗಿ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನಲೆಯಲ್ಲಿ  20ಕ್ಕೂ ಹೆಚ್ಚು ಅಬಕಾರಿ ಹಾಗೂ ಐಟಿ ಅಧಿಕಾರಿ ರಾತ್ರಿ 10 ಗಂಟೆ ಸುಮಾರಿಗೆ ದಿಢೀರ್ ದಾಳಿ ನಡೆಸಿದ್ದಾರೆ.

ಆದರೆ ದಾಳಿಯ ವೇಳೆ ಯಾವುದೇ ಹಣ, ಮದ್ಯ ಸಿಗದೆ ಅಧಿಕಾರಿಗಳು ವಾಪಾಸಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯ ಮನೆ ಮೇಲೆ ಈ ವೇಳೆ ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಪ್ರಯೋಜಿತ ದಾಳಿ ಎಂದು ಕಿಡಿಕಾರಿದ್ದಾರೆ.

Leave a Reply