Cricket world cup : ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ,, ಎಲ್ಲಡೆ ಹೆಚ್ಚಿದ ಕಾತುರ..

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ, ಉಭಯ ತಂದಗಳು ಮಾಎಉ ಇಲ್ಲವೆ ಮಡಿ ಪಂದ್ಯಕ್ಕೆ ಸಜ್ಜಾಗಿವೆ..

ಈ ಬಾರಿಯ ವಿಶ್ವಕಪ್​​ನಲ್ಲಿ ಭಾರತ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಭರ್ಜರಿ ಜಯ ಸಾಧಿಸಿದರೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ 5 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ. ಇತ್ತ ಪಾಕಿಸ್ತಾನ ಆಡಿರುವ 4 ಪಂದ್ಯಗಳಲ್ಲಿ ಕೇವಲ ಒಂದನ್ನು ಗೆದ್ದರೆ, ಎರಡು ಪಂದ್ಯ ಸೋಲುಂಡಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿ 3 ಅಂಕದೊಂದಿಗೆ 9ನೇ ಸ್ಥಾನದಲ್ಲಿದೆ.

ಟೀಂ ಇಂಡಿಯಾ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್‍ನಲ್ಲಿ ಉತ್ತಮ ಲಯ ಕಾಯ್ದುಕೊಂಡಿರುವುದು ಪ್ಲಸ್ ಪಾಯಿಂಟ್. ಆದರೆ ಪಾಕಿಸ್ತಾನ ತಂಡದಲ್ಲಿ ಕೆಲವು ನ್ಯೂನ್ಯತೆಗಳಿವೆ. ಸಾಮೂಹಿಕ ಜವಾಬ್ದಾರಿಯಿಂದ ಪಂದ್ಯವನ್ನು ನಿರ್ವಹಿಸುವ ಅನುಭವ ಇಲ್ಲದಿರುವುದು ಪಾಕ್​ನ ತಂಡದ ನೆಗೆಟಿವ್ ಅಂಶ.

ಈ ಹೈವೋಲ್ಟೇಜ್ ಪಂದ್ಯಕ್ಕೆ ಕೊಹ್ಲಿ ಪಡೆ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಅಂದಾಜಿದೆ. ಈಗಾಗಲೇ ಶಿಖರ್ ಧವನ್ ಇಂಜುರಿಗೆ ತುತ್ತಾಗಿ ವಿಶ್ರಾಂತಿಯಲ್ಲಿದ್ದು, ಓಪನರ್​ ಆಗಿ ರೋಹಿತ್ ಶರ್ಮಾ ಜೊತೆ ಕೆ ಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, 4ನೇ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದೆ ಕುತೂಹಲ. ವಿಜಯ್ ಶಂಕರ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಅನುಭವದ ಆಧಾರದ ಮೇಲೆ ಕಾರ್ತಿಕ್​ಗೆ ಅವಕಾಶ ಸಿಗುವ ಅಂದಾಜಿದೆ.

2017ರ ಚಾಂಪಿಯನ್​ಶಿಪ್​ ಟ್ರೋಫಿಯಲ್ಲಿ ಭಾರತ ತಂಡ ಪಾಕ್​ ವಿರುದ್ಧ ಸೋತಿತ್ತು. ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ವಿರಾಟ್​ ಕೊಹ್ಲಿ ಪಡೆ ತಯಾರಿ ನಡೆಸಿದೆ. ಇನ್ನು, ಮ್ಯಾಂಚೆಸ್ಟರ್​ನ ಹವಾಮಾನ ಹೇಗಿದೆ ಎಂಬ ವಿಚಾರದ ಕುರಿತು ಟ್ವಿಟ್ಟರ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅನೇಕರು ಆಗಸದ ಫೋಟೋ ತೆಗೆದು ಟ್ವೀಟ್​ ಮಾಡುತ್ತಿದ್ದಾರೆ.

ಹವಾಮಾನ ಇಲಾಖೆ ಹೇಳುವ ಪ್ರಕಾರ ಮ್ಯಾಂಚೆಸ್ಟರ್​ನಲ್ಲಿ ಈಗ ಮೋಡ ಕವಿದ ವಾತಾವರಣ ಇದೆ. ಮಧ್ಯಾಹ್ನದ ವೇಳೆಗೆ ಚಿಕ್ಕದಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತ-ನ್ಯೂಜಿಲೆಂಡ್ ಪಂದ್ಯ ನಡೆಯುವ ದಿನ ಹವಾಮಾನ ತೀರಾ ಹದಗೆಟ್ಟಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಇಂದಿನ ಪರಿಸ್ಥಿತಿ ಉತ್ತಮವಾಗಿದೆ ಎಂಬುದು ಹವಾಮಾನ ಇಲಾಖೆ ಅಧಿಕಾರಿಗಳ ಅಭಿಪ್ರಾಯ.

Leave a Reply