ಬಸ್‌ನಲ್ಲಿ ವಿದ್ಯಾರ್ಥಿನಿ ಎದುರೇ ಹಸ್ತಮೈಥುನ : ಮಾಹಿತಿ ನೀಡಿದವರಿಗೆ ಸಿಗಲಿದೆ ಬಹುಮಾನ

ದೆಹಲಿ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಎದುರು ಕಾಮುಕನೊಬ್ಬ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಹುಡುಕಿಕೊಟ್ಟವರಿಗೆ 25 ಸಾವಿರ ರೂ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.

ವಿದ್ಯಾರ್ಥಿನಿಯೊಬ್ಬಳ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾಮುಕನೊಬ್ಬ ವಿದ್ಯಾರ್ಥಿನಿ ಪಕ್ಕ ಕುಳಿತು ಹಸ್ತಮೈಥುನ ಮಾಡಿಕೊಂಡಿದ್ದಲ್ಲದೆ, ಆಕೆಯ ಸೊಂಟ ಮುಟ್ಟಿ ಕಿರುಕುಳ ನೀಡಿದ್ದ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ಆತನಿಗಾಗಿ ಪೊಲೀಸರು ಎಷ್ಟೇ ಹುಡುಕಾಡಿದರೂ ಸಿಗದ ಹಿನ್ನೆಲೆಯಲ್ಲಿ ಆತನನ್ನನು ಹುಡುಕಿಕೊಟ್ಟವರಿಗೆ ಇನಾಮು ನೀಡುವುದಾಗಿ ಘೋಷಿಸಿದ್ದಾರೆ.

ಆತನ ಬಗ್ಗೆ ಮಾಹಿತಿ ನೀಡಿದವರ ಹೆಸರು ಹಾಗೂ ವಿವರವನ್ನು ರಹಸ್ಯವಾಗಿಡಲಾಗುವುದು ಎಂದೂ ತಿಳಿಸಿದೆ.

 

Leave a Reply

Your email address will not be published.