ಫೇಸ್‌ಬುಕ್‌ಅನ್ನು ಬಿಜೆಪಿ ನಿಯಂತ್ರಿಸುತ್ತಿದೆ; RSSನ ದ್ವೇಷದ ಪೋಸ್ಟ್‌ಗಳಿಗೆ FB ನೆರವಾಗಿದೆ: ವರದಿ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈಗ ಫೇಸ್‌ಬುಕ್‌ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ದ್ವೇಷದ ಪೋಸ್ಟ್‌ಗಳನ್ನು ನಿರ್ಬಂಧಿಸುತ್ತಿಲ್ಲ. ಅವರ ಪ್ರತಿನಿತ್ಯದ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡಲು ಫೇಸ್‌ಬುಕ್‌ ವೇದಿಕೆ ಕಲ್ಪಿಸಿದೆ. ಇದರಿಂದಾಗಿ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಅಮೇರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ತಮ್ಮ ಸಂಸ್ಥೆಯ ನಿಯಮಗಳಿಗೆ ವಿರುದ್ಧವಿದ್ದರೂ ಸಹ ಬಿಜೆಪಿ ಮತ್ತು ಹಿಂದುತ್ವ ನಾಯಕರ ದ್ವೇಷದ ಭಾಷಣಗಳನ್ನು ತೆಗೆದುಹಾಕಲು ಫೇಸ್‌ಬುಕ್ ನಿರಾಕರಿಸಿದೆ ಎಂದು ಫೇಸ್‌ಬುಕ್‌ ಭಾರತದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದ್ದು, ವರದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ರಾಹುಲ್‌ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Image

ಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಸಾಮಾಜಿಕ ಮಾಧ್ಯಮದ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ವರದಿ ಮಾಡಿದೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಆಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

Image

ನರೇಂದ್ರ ಮೋದಿ ನೇತೃತ್ವದ ಪಕ್ಷದ ಸದಸ್ಯರು ಮಾಡುವ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡಿದರೆ ಮುಂದಿನ ದಿನಗಳಲ್ಲಿ ಸಂಸ್ಥೆಯ ವ್ಯವಹಾರಕ್ಕೆ ಸಮಸ್ಯೆಯಾಗಬಹುದು ಎಂದು ಸಿಬ್ಬಂದಿಗೆ ಸೂಚಿಸಿದ್ದರು ಎಂದು ಹೆಸರು ಹೇಳದ ಸಿಬ್ಬಂದಿಯೋರ್ವರು ಹೇಳಿದ್ದಾರೆ.

ಮುಸ್ಲೀಮರ ವಿರುದ್ಧದ ಹಲವಾರು ಸುಳ್ಳು ಸುದ್ಧಿ ಹರಡುವ ಪೋಸ್ಟ್ ಗಳನ್ನು ಬಿಜೆಪಿ ನಾಯಕರು ಹಾಕುತ್ತಿದ್ದರೂ ಸಹ ದಾಸ್ ಮತ್ತವರ ತಂಡ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಚುನಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ದಾಸ್ ಮತ್ತವರ ತಂಡ ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಂಡಿದ್ದರು ಎಂದು ಫೇಸ್‌ಬುಕ್‌ನ ಸಿಬ್ಬಂಧಿಯೊಬ್ಬರು ಮಾಹಿತಿ ನೀಡಿರುವುದಾಗಿ ಪತ್ರಿಕೆ ಹೇಳಿದೆ.


ಇದನ್ನೂ ಓದಿಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಕಠಿಣ ನೀತಿಗಳು ಬೇಕು: ಫೇಸ್‌ಬುಕ್‌ ಸಿಇಓಗೆ ಸಂಶೋಧಕರ ಪತ್ರ
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love
Verified by MonsterInsights