ಹಾಲಿ-ಮಾಜಿ ಸಿಎಂ ಮತಭೇಟೆ : ತೀವ್ರ ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ!

ರಾಜ್ಯದಲ್ಲಿ ಕುಂದಗೋಳ ಹಾಗೂ ಚಿಂಚುಳ್ಳಿ ಉಪಚುನಾವಣೆಯಲ್ಲಿ ಗೆಲವು ಸಾಧಿಸುವುದು ಮೈತ್ರಿ ಹಾಗೂ ಬಿಜೆಪಿ ಪಕ್ಷಕ್ಕೆ ಪ್ರಮುಖವಾಗಿದೆ. ಈ ಎರಡೂ ಕ್ಷೇತ್ರದಲ್ಲಿ ಜಯ ಸಾಧಿಸಿದರೆ ಸರ್ಕಾರ ರಚನೆಗೆ ಸುಲಭವಾಗುವ ಹಿನ್ನೆಲೆಯಲ್ಲಿ ಎರಡೂ ಪಕ್ಷದ ನಾಯಕರು ಮತಭೇಟೆಗಿಳಿದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿಕೂಟದ ಸರ್ಕಾರ ಅಧಿಕಾರಲ್ಲಿದ್ದರೂ ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಈ ಸರ್ಕಾರ ಇರುತ್ತೋ ಇಲ್ಲವೋ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಅದರಲ್ಲೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.‌ ವಿಶ್ವನಾಥ್‌, ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ವಿರುದ್ದ ನೇರವಾಗಿ ವಾಗ್ದಾಳಿ ನಡೆಸಿದ್ದು, ಇದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲು ಕಾರಣವಾಗಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಹುಬ್ಬಳ್ಳಿಯಲ್ಲಿ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ಕೂತೂಹಲ ಮೂಡಿಸಿದೆ. ಕುಮಾರಸ್ವಾಮಿಯವರು ತಂಗಿದ್ದ ಹೋಟೆಲ್‌ ಗೆ ಆಗಮಿಸಿದ ಸಿದ್ದರಾಮಯ್ಯನವರು ಉಪ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಜೊತೆಗೆ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆನ್ನಲಾಗಿತ್ತು.

ಆದರೆ ಹುಬ್ಬಳ್ಳಿಯಲ್ಲಿ ಒಂದೇ ಹೋಟೆಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ಇದ್ದರೂ ಭೇಟಿಯಾಗದೇ ಹೋಗಿದ್ದು ಭಾರೀ ಕುತೂಹಲ ಕೆರಳಿಸಿದೆ.

Leave a Reply

Your email address will not be published.