ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರಿಗೆ ಒತ್ತಾಯ : ಸಿಎಂಗೆ ಪತ್ರ ಬರೆದ ಡಿಕೆಶಿ

ಕನಕಪುರದ ಮೆಡಿಕಲ್ ಕಾಲೇಜು ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು. ಭೂಮಿಪೂಜೆ ಮಾಡುವುದಕ್ಕೆ ಸಮಯಕೊಡುವಂತೆ ಮನವಿ ಮಾಡಿದ್ದಾರೆ.

ಕಾಲೇಜು ನೀಡದಿದ್ದರೆ ನನ್ನದೇ ಹಾದಿಯಲ್ಲಿ ಗಂಭೀರ ಹೋರಾಟಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Leave a Reply

Your email address will not be published.