ರೈತರ ಸಾಲ ಮನ್ನಾ : ಅಧಿಕೃತ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರ ಸಾಲ ಮನ್ನಾ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಣೆ ಹೊರಡಿಸಿದ ಮೂರು ದಿನಗಳಲ್ಲಿ  ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ೫೦ ಸಾವಿರ ರೂ.ಗಳವರೆಗಿನ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬುಧವಾರ ಘೋಷಿಸಿದ್ದರು. ಘೋಷಣೆಯ ಮರು ದಿನವೇ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯವನ್ನೂ ಅಂಗೀಕರಿಸಲಾಗಿತ್ತು. ಇದೀಗ ಆದೇಶವೂ ಹೊರಬಂದಿದ್ದು, ಸಾಲ ಮನ್ನಾ ಅಧಿಕೃತವಾಗಿ ಜಾರಿಗೆ ಬಂದಿದೆ. ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಸಾಲ ಮನ್ನಾ ಘೋಷಣೆಯಾಗಿದ್ದರೂ ಈವರೆಗೆ ಆದೇಶ ಪತ್ರ ಹೊರ ಬಂದಿಲ್ಲ.

Comments are closed.