ನೂರಾರು ಬಾಲಕಿಯರ ಮೇಲೆ ಅತ್ಯಾಚಾರ..!

ಅಪ್ರಾಪ್ತ ಬಾಲಕಿಯರನ್ನೇ ಗುರಿಯಾಗಿಸಿಕೊಂಡು ನೂರಾರು ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ ಅತ್ಯಾಚಾರಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯರ ಮೇಲೆ ಕಣ್ಣು ಹಾಕಿ ಮಕ್ಕಳಿಗೆ ತಪ್ಪು ಮಾಹಿತಿ ನೀಡಿ ಅವರನ್ನು ಕರೆದುಕೊಂಡು ಹೋಗುತ್ತಿದ್ದ. ಇನ್ನೂ ಇವನು ದೆಹಲಿ, ಘಾಜಿಯಾಬಾದ್, ಅಶೋಕ್ ನಗರ ಅಪರಾಧ ಕೃತ್ಯಗಳನ್ನು ಎಸಗಿದ್ದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೂ ಮದುವೆಯಾಗಿ ಐದು ಮಕ್ಕಳ ತಂದೆಯಾಗಿರುವ ಸುನಿಲ್ ರಸ್ತೋಗಿ (38) ಬಂಧಿತ ಕಾಮುಕ. ಈತ 7 ರಿಂದ 11 ವರ್ಷದ ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ, ನಿರ್ಜನ ಪ್ರದೇಶಗಳಿಗೆ ಕೊಂಡೊಯ್ದು ಅತ್ಯಾಚಾರ ಎಸಗಿ ಪರಾರಿಯಾಗುತ್ತಿದ್ದ. ಕಳೆದ 13 ವರ್ಷಗಳಿಂದ ಅನೇಕ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಈ ಕಾಮುಕನ ವಿರುದ್ಧ  ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ್‌ಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಅತ್ಯಾಚಾರ ನಡೆಸಿದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ ಪೊಲೀಸರು ಆರೋಪಿ ಬಂಧನಕ್ಕಾಗಿ ವಿಶೇಷ ತಂಡವೊಂದನ್ನು ರಚಿಸಿಕೊಂಡು ಈ ಶಿಶುಕಾಮಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Comments are closed.