ಕ್ಷಮೆ ಯಾಚಿಸಲು ನಾನು ಸಾವರ್ಕರ್ ಅಲ್ಲ – ಬಿಜೆಪಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

ಸತ್ಯ ಹೇಳಿ ಅದಕ್ಕಾಗಿ ಕ್ಷಮೆ ಯಾಚಿಸಲು ನಾನು ಸಾವರ್ಕರ್ ಅಲ್ಲ. ನಾನು ರಾಹುಲ್ ಗಾಂಧಿ. ಸತ್ಯ ನುಡಿದು ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಮೋದಿ ಸರಕಾರದ ಆಡಳಿತ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಬಚಾವೋ ರ್‍ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ರೇಪ್ ಇನ್ ಇಂಡಿಯಾ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರಲ್ಲದೇ ಅದಕ್ಕಾಗಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ ಎಂದರು.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಈಶಾನ್ಯ ರಾಜ್ಯಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ನನ್ನ ಹೇಳಿಕೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆಪಾದಿಸಿದರು.

ಈ ಮಧ್ಯೆ ಮೋದಿ ಸರಕಾರದ ಆರ್ಥಿಕ ನೀತಿಗಳನ್ನು ಆಲೋಚಿಸಿದ ರಾಹುಲ್ ಗಾಂಧಿ ಈ ಸರಕಾರ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟ ನೆಪದಲ್ಲಿ ಮೂರು ವರ್ಷಗಳ ಹಿಂದೆ ನೋಟು ಅಮಾನ್ಯದಂತಹ ನಿಧಾರ ಕೈಗೊಳ್ಳುವ ಮೂಲಕ ಇಂದು ಭಾರತದ ಆರ್ಥಿಕತೆ ತೀವ್ರ ಕುಸಿತದ ಸುಳಿಯಲ್ಲಿ ಸಿಲುಕಿದೆ. ಇದಕ್ಕೆ ಮೋದಿ ಅವರೇ ನೇರ ಹೊಣೆ ಎಂದು ರಾಹುಲ್ ದೂರಿದರು.

Leave a Reply

Your email address will not be published.