ರಾಜ್ಯದ ವಿವಿಧೆಡೆ ಎಸಿಬಿ ದಾಳಿ ಅಗತ್ಯ ದಾಖಲೆಗಳ ಪರಿಶೀಲನೆ!

ಮಂಗಳವಾರ ಬೆಳಿಗ್ಗೆಯೇ ಬೆಳಗಾವಿ, ಚಿತ್ರದುರ್ಗ ಮತ್ತು ಹುಬ್ಬಳ್ಳಿಯಲ್ಲಿ ಮಿತಿ ಮೀರಿದ ಆದಾಯ ಹೊಂದಿರುವವರ ಮನೆ ಮೇಲೆ ಎಸಿಬಿ‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿಯ ಡೆಪ್ಯೂಟಿ ತಹಸೀಲ್ದಾರ ಸಲೀಂ ಸಾಬುಸಾಬ್ ಸೈಯದ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿಯ  ನಗರದ ರಾಮತೀರ್ಥ ನಗರ ಬಡಾವಣೆಯ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕರಿಯಪ್ಪ ಕರ್ನಲ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವಿಶ್ವೇಶ್ವರಯ್ಯ ನಗರದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ ಇವರ ಸ್ನೇಹಿತರ ಮನೆಯ ಮೇಲೂ ದಾಳಿ ನಡೆದಿದೆ.

ಚಿತ್ರದುರ್ಗದಲ್ಲಿ ಸಾರಿಗೆ ಇಲಾಖೆ ನಿರೀಕ್ಷಕರ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದೆ. ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಕರುಣಾಕರ್ ಮನೆ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕರುಣಾಕರ  ಶಿವಮೊಗ್ಗ ಮೂಲದ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ಮನೆ ಮೇಲೂ ಅಧಿಕಾರಿಗಳ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.

Comments are closed.