ಸಚಿವ ರಮೇಶ್ ಜಾರಕಿಹೊಳಿ ಮನೆಗೆ ಬಿಜೆಪಿ ಶಾಸಕರ ಭೇಟಿ : ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ

ಸಚಿವ ಸಂಪುಟ ವಿಳಂಬ ವಿಚಾರ ಕುರಿತು ಮುಂಬೈಗೆ ಹೋಗುತ್ತಾರೆ ಅನ್ನೋ ಮಾತು ಸುಳ್ಳು ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಅದನ್ನ ರಾಹುಲ್ ಗಾಂಧಿ ಬಗೆಹರಿಸುತ್ತಾರೆ. ಎರಡು ದಿನದಿಂದ ನಾನು ಎಲ್ಲಿಗೂ ಹೋಗಿಲ್ಲ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ನಲ್ಲೇ ಇದ್ದೇನೆ ಎಂದಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ ಮನೆಗೆ ಬಿಜೆಪಿ ಶಾಸಕರು ಭೇಟಿ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಪರಣ್ಣ ಮನವಳ್ಳಿ, ಬಾಗಲಕೋಟೆ ಜಿಲ್ಲೆಯ ತೆರದಾಳ ಶಾಸಕ ಸಿದ್ದು ಸವದಿ , ಶಾಸಕ ಮಹದೇವಪ್ಪ ಇವರೆಲ್ಲಾ ರಮೇಶ್ ಜಾರ್ಕಿಹೊಳಿ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕರು ತಾವು ಜಾರಕಹೊಳಿ ಅವರನ್ನ ಭೇಟಿ ಮಾಡಿದ್ದು ನಿಜ, ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಾಜಕಾರಣ ನನಗೆ ಸಾಕಾಗಿ ಹೋಗಿದೆ.  ನಮ್ಮ ಹೆಸರನ್ನು ಎಳೆದು ತರುತ್ತಿದ್ದಾರೆ. ನಾನು ಮಹಾರಾಷ್ಟ್ರ ಸೇರಿದಂತೆ ಎಲ್ಲಿಗೂ ಹೋಗಿಲ್ಲ. ನಾನು ಕಾಂಗ್ರೆಸ್‍ನಲ್ಲೇ ಇದ್ದೇನೆ. ಮುಂದೆಯೂ ಇರುತ್ತೇನೆ. ವಾಲ್ಮೀಕಿ ಸಮುದಾಯದ ಶಾಸಕರು ಬಂದು ನನ್ನನ್ನು ಸಂಪರ್ಕಿಸುತ್ತಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಲು ನಾನು ನಾಯಕತ್ವ ವಹಿಸುತ್ತೇನೆ. ಅದನ್ನೇ ಭಿನ್ನಮತ ಎಂದು ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

Leave a Reply