ಮೋದಿ ರಾಜ್ಯದ ಯಾವುದೇ ಮೂಲೆಯಿಂದ ಚುನಾವಣೆಗೆ ಸ್ಪರ್ಧಿಸಿದರೂ ಸೋಲಿಸುತ್ತೇವೆ : ಡಿಸಿಎಂ

ತುಮಕೂರು : ‘ ಮುಂದಿನ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದೇ ಮೂಲೆಯಿಂದ ಸ್ಪರ್ಧಿಸಿದರೂ ನಾವು ಅವರನ್ನು ಸೋಲಿಸುತ್ತೇವೆ ‘ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.  ಈ ವಿಚಾರದ ಬಗ್ಗೆ ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ‘ ರಾಜ್ಯದಲ್ಲಿ ಪ್ರಧಾನಿ ಮೋದಿ ಸ್ಪರ್ಧಿಸಿದರೆ ನಾವು ಅವರನ್ನು ಸೋಲಿಸುತ್ತೇವೆ ‘ ಎಂದು ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಗುಜರಾತಿನ ವಡೋದರಾ ಹಾಗೂ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಿ, ಎರಡೂ ಕ್ಷೇತ್ರಗಳಲ್ಲಿಯೂ ಜಯ ಗಳಿಸಿದ್ದರು. ಆದರೆ ಮೋದಿ ಈ ಬಾರಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ.

Leave a Reply