12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ : ಸಂತಸ ವ್ಯಕ್ತಪಡಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಮೋದಿ…

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತು ಜಾರ್ಖಂಡ್ ನಲ್ಲಿ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಕರ್ನಾಟಕದ ಜನತೆ ಬಿಜೆಪಿ ಮೇಲೆ ವಿಶ್ವಾಸವಿಟ್ಟಿರುವುದಕ್ಕೆ ಧನ್ಯವಾದಗಳು.  ಉಪಚುನಾವಣೆಯಲ್ಲಿ  ಕನ್ನಡಿಗರು ಕಾಂಗ್ರೆಸ್ ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ. ಎಂದು ಹೇಳಿದರು.

ಹಾಗೆಯೇ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಉಪಚುನಾವಣೆಯ ಗೆಲುವಿಗೆ ಶುಭಾಶಯ ಕೋರಿದ್ದಾರೆ. ನಿಮ್ಮ ಅಭಿವೃದ್ಧಿ ಕಾರ್ಯ ಮುಂದುವರೆಯಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

Leave a Reply