‘ನಾನು ಪರಮಶಿವ’ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಹೊಸ ವಿಡಿಯೋ ವೈರಲ್

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಅಕ್ರಮ ಬಂಧನ ಸೇರಿದಂತೆ ವಿವಿಧ ಪ್ರಕರಣಗಳನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ ಹೊಸ ವಿಡಿಯೋ ವೈರಲ್ ಆಗಿದೆ.

‘ನನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಯಾವ ನ್ಯಾಯಾಲಯ ಕೂಡ ನನ್ನನ್ನು ದಂಡಿಸಲು ಸಾಧ್ಯವಿಲ್ಲ’ ಎಂದು ನಿತ್ಯಾನಂದ ಸ್ವಾಮಿ ಹೇಳಿಕೊಂಡಿದ್ದಾನೆ. ತನ್ನನ್ನು ತಾನು ಪರಮಶಿವ ಎಂದು ಕರೆದುಕೊಂಡಿರುವ ನಿತ್ಯಾನಂದ, ನಿಮಗೆ ಸಾವು ಬರುವುದಿಲ್ಲ ಎಂಬ ವಚನ ನೀಡುವುದಾಗಿ ಅನುಯಾಯಿಗಳಿಗೆ ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಿತ್ಯಾನಂದನ ವೀಸಾ ಅವಧಿ ಮುಕ್ತಾಯವಾಗಿದ್ದು, ನವೀಕರಿಸುವ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇದರ ನಡುವೆಯೂ ನಿತ್ಯಾನಂದ ಈಕ್ವೇಡಾರ್ ನಲ್ಲಿ ಅವಿತುಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ ಅಲ್ಲಿಯೇ ದೇಶವನ್ನೂ ನಿರ್ಮಿಸಲು ಸಿದ್ಧತೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಈ ಕುರಿತು ಈಕ್ವೇಡಾರ್ ಸರ್ಕಾರ ಸ್ಪಷ್ಟಪಡಿಸಿದ್ದು, ನಿತ್ಯಾನಂದ ಹಾಗೂ ನಮ್ಮ ದೇಶಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಕ್ವೇಡಾರ್ ನಲ್ಲಿ ಖಾಸಗಿ ಹಿಮಪ್ರದೇಶವನ್ನು ಖರೀದಿಸಿ, ಇದು ತನ್ನ ದೇಶ ಎಂಬಂತೆ ನಿತ್ಯಾನಂದ ಬಿಂಬಿಸುತ್ತಿದ್ದಾನೆ. ಅಲ್ಲದೆ ಇದಕ್ಕಾಗಿ ಈಗಾಗಲೇ ಧ್ವಜ, ಲಾಂಛನ, ಪಾಸ್‍ಪೋರ್ಟ್‍ಗಳನ್ನು ಸಹ ಸಿದ್ಧಪಡಿಸಿದ್ದು, ಈ ದೇಶಕ್ಕೆ ಕೈಲಾಸ ಎಂದು ಹೆಸರಿಟ್ಟಿದ್ದಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿತ್ತು.

“No judiciary can touch me. M param shiva” : from an undisclosed location.

Leave a Reply

Your email address will not be published.