ನಿರ್ಭಯಾ ಪ್ರಕರಣ : ಇಂದು ಆರೋಪಿ ಸಲ್ಲಿಸಿದ ಕ್ಯುರೇಟಿವ್ ಅರ್ಜಿ ವಿಚಾರಣೆ

ನಿರ್ಭಯಾ ಅತ್ಯಾಚಾರದ ಆರೋಪಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೊಳಪಡಿಸಲಾಗುತ್ತದೆ. ನಿರ್ಭಯ ಆರೋಪಿಗಳಿಗೆ ಈಗಾಗಲೇ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ್ದು, ಇದಕ್ಕೆ ಆರೋಪಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆ ಕೋರ್ಟ್ ನಲ್ಲಿ ನಡೆಯಲಿದ್ದು, ಇದು ನಿರ್ಭಯಾ ಆರೋಪಿಗಳಿಗೆ ಇರುವ ಕೊನೆಯ ಅವಕಾಶ ಎಂದು ಹೇಳಲಾಗುತ್ತಿದೆ.

ಹೌದು… ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ವಿನಯ್ ಶರ್ಮಾ ಹಾಗೂ ಮುಖೇಶ್ ಕ್ಯುರೆಟಿವ್ ಅರ್ಜಿ ಸಲ್ಲಿಸಿದ್ದು, ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿಮಾಡಿಕೊಂಡಿದ್ದಾರೆ. ಪುನರ್ ಪರಿಶೀಲನಾ ಅರ್ಜಿ ವಜಾಗೊಂಡ ಬಳಿಕ ಮತ್ತೊಮ್ಮೆ ಆರೋಪಿಗಳು ಅರ್ಜಿ ಹಾಕಿದ್ದಾರೆ.ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.

ಜನವರಿ 22 ರಂದು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಪಟಿಯಾಲಾ ಹೌಸ್ ನ್ಯಾಯಾಲಯ ಈಗಾಗಲೇ ಆದೇಶ ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.