ಇನ್ನೂ ಆಗಿಲ್ಲ ಸಂಪುಟ ವಿಸ್ತರಣೆ : ಸಿಎಂ ಮಾತ್ರ ಫುಲ್ ಆ್ಯಕ್ಟೀವ್ – ಇದರ ಗುಟ್ಟೇನು..?

ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಭರ್ಜರಿ ಜಯ ಗಳಿಸಿದ ಬಳಿಕ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮೂರೂವರೆ ವರ್ಷ ಸಿಎಂ ಸ್ಥಾನ ಫಿಕ್ಸ್ ಆಗಿರೋ ಹಿನ್ನೆಲೆಯಲ್ಲಿ ಹೊಸ ಜೋಷ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ಕ್ಯಾಬಿನೆಟ್ ಇನ್ನೂ ಪೂರ್ತಿ ಆಗಿಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ಕೊಡಬೇಕು. ಆದರೆ ಬಿಜೆಪಿಯ ಕೇಂದ್ರದ ನಾಯಕರು ಸಿಎಂ ಯಡಿಯೂರಪ್ಪಗೆ ಇನ್ನೂ ಸಂಪುಟ ವಿಸ್ತರಣೆ ಮಾತುಕತೆಗೆ ಸಮಯ ಕೊಟ್ಟಿಲ್ಲ. ಹೀಗಾಗಿ ಇನ್ನೂ ಸ್ವಲ್ಪ ದಿನ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿಯುತ್ತದೆ. ಈ ಮಧ್ಯೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗಿಂತಲೂ ಬಜೆಟ್ ತಯಾರಿಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಈ ಅವಧಿಯ ಬಿಜೆಪಿ ಸರ್ಕಾರದ ಮೊದಲ ಬಜೆಟ್ ನ್ನ ಸಿಎಂ ಯಡಿಯೂರಪ್ಪ ಫೆಬ್ರವರಿಯಲ್ಲಿ ಮಂಡನೆ ಮಾಡಲಿದ್ದಾರೆ. ಹೀಗಾಗಿ ಈಗಿನಿಂದಲೇ ಬಜೆಟ್ ಸಿದ್ಧತೆ ಪ್ರಾರಂಭ ಮಾಡಿದ್ದಾರಂತೆ. ಬಜೆಟ್ ಬಗ್ಗೆ ಎಷ್ಟು ತಲೆ ಕೆಡಿಸಿಕೊಂಡಿದ್ದಾರೆ ಅಂದ್ರೆ, ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚು ಆಸಕ್ತಿ ಇಲ್ಲದಂತೆ ಬಜೆಟ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರಂತೆ.