ಸಭೆಗೆ ಆಹ್ವಾನಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿಗೆ ಕರೆಮಾಡಿದ ಪ್ರಧಾನಿ ಮೋದಿ

ಕೊರೊನಾ ವೈರಸ್‌ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ ಮತ್ತು ಪ್ರತಿಭಾ ಪಾಟೀಲ್, ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಹಾಗೂ ವಿರೋಧ ಪಕ್ಷದ ನಾಯಕರುಗಳಗೆ ಸಭೆಗೆ ಆಹ್ವಾನಿಸಿ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೋದಿಯವರು ಕಾಂಗ್ರೆಸ್ಸಿನ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಮತ್ತು ತೃಣಮೂಲ ಮುಖ್ಯಸ್ಥ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಕ್ ಹಾಗೂ ಕೆ.ಸಿ.ಆರ್, ಎಂ.ಕೆ.ಸ್ಟಾಲಿನ್ ಮತ್ತು ಮಿತ್ರ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಹಲವಾರು ನಾಯಕರಿಗೆ ಕರೆ ಮಾಡಿ ಸಭೆಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್‌ ಭೀತಿ ಹೆಚ್ಚಾಗಿದ್ದು, ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ 80ರ ಗಡಿ ದಾಟಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಏಪ್ರಿಲ್‌ 29ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಈ ಸಭೆಗೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗುತ್ತಿದೆ.

ಇಂದು ಬೆಳಗ್ಗೆ ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರ ಈ ನಡೆಯನ್ನು ಶ್ಲಾಘಿಸಿದ್ದಾರೆ.