ಸಿಎಎ ವಿರುದ್ಧ ಪ್ರತಿಭಟನೆ ವೇಳೆ ಗುಂಡುಹಾರಿಸಿದ ದುಷ್ಕರ್ಮಿ : ಓರ್ವ ವಿದ್ಯಾರ್ಥಿಗೆ ಗಾಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

ಗುರುವಾರ ವಿದ್ಯಾರ್ಥಿಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ಪೊಲೀಸರಿಗೆ ಜಿಂದಾಬಾದ್ ಎಂದು ಕೂಗುತ್ತಾ ಬರುತ್ತಿದ್ದ ವ್ಯಕ್ತಿಯೊಬ್ಬ, ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದಷ್ಟೇ ಅಲ್ಲದೆ ವಿದ್ಯಾರ್ಥಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಪರಿಣಾಮ ಓರ್ವ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ನಡೆಯುತ್ತಿದ್ದಂತೆ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಆದರೆ, ಆತ ಯಾರು? ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಕಾರಣ ಏನು? ಎಂಬುದು ಪೊಲೀಸ್ ವಿಚಾರಣೆ ನಂತರ ಬೆಳಕಿಗೆ ಬರಬೇಕಿದೆ.