ಖಾಲಿ ಇರುವ ಇನ್ನೆರಡು ಕ್ಷೇತ್ರಗಳಿಗೆ ಶೀಘ್ರವೇ ಚುನಾವಣೆ – ಬಿಎಸ್ ವೈ ಸಜ್ಜು

ಉಪಚುನಾವಣೆ ಗೆದ್ದು ಖುಷಿಯಲ್ಲಿರುವ ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ, ಖಾಲಿ ಇರುವ ಇನ್ನೆರಡು ಕ್ಷೇತ್ರಗಳಿಗೂ ಶೀಘ್ರವಾಗಿ ಚುನಾವಣೆ ನಡೆಸಲು ತಯಾರಿ ನಡೆಸಿದ್ದಾರೆ.

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರಗಳ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿದ್ದರೂ ಸಹ ಆ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿಗಳು ದೂರು ದಾಖಲಿಸಿದ್ದ ಕಾರಣ ಈ ಕ್ಷೇತ್ರಗಲ್ಲಿ ಉಪಚುನಾವಣೆ ನಡೆದಿರಲಿಲ್ಲ.

ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ ಪಕ್ಷದ ಪರ ವಾತಾವರಣ ಇರುವ ಇದೇ ಸಂದರ್ಭದಲ್ಲಿ ಇನ್ನುಳಿದ ಕ್ಷೇತ್ರಗಳಲ್ಲೂ ಉಪಚುನಾವಣೆಗೆ ಕಾರ್ಯಪ್ರವೃತ್ತರಾಗಿದ್ದಾರೆ. ಈಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಸಮಸ್ಯೆಯನ್ನು ಬಗೆಹರಿಸಿದ್ದು, ಯಡಿಯೂರಪ್ಪ ಸೂಚನೆಯಂತೆ ಅನರ್ಹ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಸನಗೌಡ ತುರವಿಹಾಳ ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ.

ಪ್ರತಾಪ್ ಗೌಡ ಪಾಟೀಲ್ ಅವರು ಎದುರಾಳಿ ಬಸನಗೌಡ ತುರುವಿಹಾಳ ವಿರುದ್ಧ ಕೇವಲ 213 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಫಲಿತಾಂಶದ ನಂತರ ಬಸನಗೌಡ ತುರುವಿಹಾಳ, ಪ್ರತಾಪ್ ಗೌಡ ಪಾಟೀಲ್ ಅವರು ಚುನಾವಣೆ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ ಎಂದು ದೂರು ನೀಡಿದ್ದರು. ಇದರ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯುತ್ತಿತ್ತು. ಆದರೀಗ ಬಸನಗೌಡ ಅವರು ದೂರು ಹಿಂಪಡೆದಿದ್ದಾರೆ.

Leave a Reply