ಖಾಸಗಿತನ ಮೂಲಭೂತ ಹಕ್ಕೇ : ಸುಪ್ರೀಂನಿಂದ ಐತಿಹಾಸಿಕ ತೀರ್ಪು

ದೆಹಲಿ : ವ್ಯಕ್ತಿಯ ಖಾಸಗಿತನ ಆತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌ ಖೇಹರ್‌ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ ಎಲ್ಲಾ ಸೇವೆಗಳಿಗೂ ಆಧಾರ ಕಡ್ಡಾಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಕೆಲ ರಾಜ್ಯಗಳು ಸುಪ್ರೀಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದವು. ಆಧಾರ್‌ ಕಾರ್ಡ್‌ನಲ್ಲಿ ಜನರ ವೈಯಕ್ತಿಕ ಮಾಹಿತಿ ನೀಡಬೇಕಾಗುತ್ತದೆ. ಇದು ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ಆರೋಪಿಸಿ, ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಪೀಠ ಖಾಸಗಿತನ ವ್ಯಕ್ತಿಯ ಹಕ್ಕು ಎಂದು ಐತಿಹಾಸಿಕ ತೀರ್ಪು ನೀಡಿದೆ.

ಖಾಸಗಿತನ ಮೂಲಭೂತ ಹಕ್ಕು ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿದ್ದು, ಖಾಸಗಿತನ ಸಂವಿಧಾನದ 21ನೇ ವಿಧಿಯ ಅನ್ವಯ ಮೂಲಭೂತ ಹಕ್ಕಾಗುತ್ತದೆ ಎಂದು ಹೇಳಿದೆ.

 

Comments are closed.