ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಕೇಂದ್ರಬಿಂದು ಸಿಎಎ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು..!

ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಕೇಂದ್ರಬಿಂದುವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಡೆಹಿಡಿಯಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ ಮತ್ತು ಕಾನೂನಿನ ಅರ್ಜಿಗಳಿಗೆ ಸ್ಪಂದಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಅಲ್ಲದೆ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಕಾನೂನಿನ ಕುರಿತು ಸುಮಾರು 140 ಅರ್ಜಿಗಳಿಗೆ ಮಧ್ಯಂತರ ಆದೇಶ ನೀಡಲಿದೆ ಎಂದು ಸಹ  ನ್ಯಾಯಾಲಯ ಹೇಳಿದೆ. ಈಗ ಬಂದಿರುವ ಮನವಿಗಳನ್ನು ತೀರ್ಮಾನಿಸುವ ಮೊದಲು ಸಿಎಎ ಮೇಲಿನ ಅರ್ಜಿಗಳನ್ನು ಆಲಿಸದಂತೆ ಸುಪ್ರೀಂ ಕೋರ್ಟ್ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚನೆ ನೀಡಿದೆ.

ತ್ರಿಪುರ ಮತ್ತು ಅಸ್ಸಾಂ ಈ ಎರಡು ರಾಜ್ಯಗಳಲ್ಲಿ ಸಿಎಎ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿರುವುದರಿಂದ ಅವುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳಲಾಗುವುದು ಎಂದು ಮೂವರು ನ್ಯಾಯಾಧೀಶರು ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು 143 ಅರ್ಜಿಗಳನ್ನು ಆಲಿಸುತ್ತಿದ್ದು,  ಅವುಗಳು ಮುಖ್ಯವಾಗಿ ಸಿಎಎ ಮಾನ್ಯತೆಯನ್ನು ಪ್ರಶ್ನಿಸಿವೆ.

ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಿಎಎಯನ್ನು ತಡೆಹಿಡಿಯಬೇಕು ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) ಸದ್ಯಕ್ಕೆ ಮುಂದೂಡಬೇಕೆಂದು ನ್ಯಾಯಾಲಯವನ್ನು ಒತ್ತಾಯಿಸಿದರು.

ಹೊಸ ಕಾನೂನು ಕಾನೂನುಬಾಹಿರವಾಗಿದೆ ಮತ್ತು ಸಂವಿಧಾನದ ಮೂಲಭೂತ ಜಾತ್ಯತೀತ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಗಳು ವಾದಿಸುತ್ತಿವೆ. ಏಕೆಂದರೆ ಅದು ಧರ್ಮವನ್ನು ಭಾರತೀಯ ಪೌರತ್ವದ ಆಧಾರವಾಗಿಸುತ್ತದೆ. ಅರ್ಜಿದಾರರಲ್ಲಿ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಸಿಪಿಐ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಅಸದುದ್ದೀನ್ ಒವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ ಮತ್ತು ಕಮಲ್ ಹಾಸನ್ ಅವರ ಮಕ್ಕಲ್ ನೀಧಿ ಮಾಯಮ್ ಸೇರಿದ್ದಾರೆ.