ಸಿಎಎ ಪ್ರತಿಭಟನೆ ವೇಳೆ ಆಜಾದಿ ಘೋಷಣೆ ಕೂಗುವವರ ವಿರುದ್ಧ ದೇಶದ್ರೋಹದ ಪ್ರಕರಣ..!

ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಆಜಾದಿ ಘೋಷಣೆ ಕೂಗುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗುವುದು ಎಂದು ಪ್ರತಿಭಟನಾಕಾರರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ದೇಶದಲ್ಲಿ ಯಾರಾದರೂ ಪ್ರತಿಭಟನೆಯ ಹೆಸರಿನಲ್ಲಿ ಅಜಾದಿ ಘೋಷಣೆಗಳನ್ನು ಕೂಗಿದರೆ ದೇಶದ್ರೋಹ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಭಾರತದಲ್ಲಿಯೇ ಇದ್ದು, ದೇಶದ ವಿರುದ್ಧ ಪಿತೂರಿ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮನೆಯಲ್ಲಿ ಕುಳಿತ ಪುರುಷರು, ಪ್ರತಿಭಟನೆ ನಡೆಸಲು ಮಕ್ಕಳು ಮತ್ತು ಮಹಿಳೆಯರನ್ನು ಬೀದಿಗೆ ಕಳುಹಿಸುತ್ತಿರುವುದು ನಾಚಿಕೆಗೇಡುತನ ಎಂದು ಹೇಳಿದ್ದಾರೆ.