ಅಮೂಲ್ಯಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸುವುದು ಅಸಾಧ್ಯ – ಡಿಸಿಪಿ ರಮೇಶ್ ಬಾನೂತ್

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ಳನ್ನು ನಾಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ 5ನೇ ಎಸಿಎಂಎಂ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾ ಳನ್ನು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತೆರೆದ ನ್ಯಾಯಾಲಯದಲ್ಲಿ ಹಾಜರುಪಡಿಸುವುದು ಸಾಧ್ಯವಿಲ್ಲ.

ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಕೆಯ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಎಂದು ಡಿಸಿಪಿ ರಮೇಶ್ ಬಾನೂತ್ 5ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಪೊಲೀಸರ ಮನವಿಯನ್ನು ತಿರಸ್ಕರಿಸಿರುವ 5ನೇ ಎಸಿಎಂಎಂ ಕೋರ್ಟ್, ನಾಳೆ ಖುದ್ದಾಗಿ ಆರೋಪಿಯನ್ನು ಹಾಜರುಪಡಿಸುವಂತೆ ಸೂಚಿಸಿದೆ.