IND vs AUS : ವಿರಾಟ್ ಕೊಹ್ಲಿ ಶತಕ – ಧೋನಿ ಅರ್ಧಶತಕ ; ಭಾರತಕ್ಕೆ 6 ವಿಕೆಟ್ ಭರ್ಜರಿ ಜಯ

ಅಡಿಲೇಡ್ ಅಂಗಳದಲ್ಲಿ ಮಂಗಳವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ 6 ವಿಕೆಟ್ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 298 ರನ್ ಮೊತ್ತ ಕಲೆಹಾಕಿತು. ಆಸ್ಟ್ರೇಲಿಯಾ ಪರವಾಗಿ ಅಮೋಘ ಶತಕ  ಬಾರಿಸಿದ ಶಾನ್ ಮಾರ್ಷ್ 131 ರನ್ ಗಳಿಸಿದರು. ಭುವನೇಶ್ವರ್ ಕುಮಾರ್ 4, ಮೊಹಮ್ಮದ್ ಶಮಿ 3 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

299 ರನ್ ಗುರಿಯನ್ನು ಬೆನ್ನತ್ತಿದ ಭಾರತ ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 299 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಸಮಯೋಚಿತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ವಿರಾಟ್ ಕೊಹ್ಲಿ 39ನೇ ಏಕದಿನ ಶತಕ ಬಾರಿಸಿದರು. 112 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನೊಳಗೊಂಡ 104 ರನ್ ಗಳಿಸಿದರು.

ಅಜೇಯ ಅರ್ಧಶತಕ ದಾಖಲಿಸಿದ ಮಹೇಂದ್ರ ಸಿಂಗ್ ಧೋನಿ 55 ರನ್ ಗಳಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದರು.

 

 

 

Leave a Reply

Your email address will not be published.